ಕೋಲಾರ

ಸ್ವಚ್ಛತೆಗೆ ಪುರಸಭೆಯಿಂದ ಕ್ರಮ

Published On :

ಕೋಲಾರ/ಶ್ರೀನಿವಾಸಪುರ: ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಚರಂಡಿ ಮತ್ತು ಕೊಳಚೆ ಪ್ರದೇಶಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಿಸಿ ಸಾಂಕ್ರಾಮಿಕ ರೋಗಾಣುಗಳ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪುರಸಭಾಧ್ಯಕ್ಷ ಸಯ್ಯದ್ ಅಬ್ದುಲ್ ಸತ್ತಾರ್ ಹೇಳಿದರು.  ಪಟ್ಟಣದ ರೇಷ್ಮೆ ಗೂಡು ಮಾರುಕಟ್ಟೆ ಮುಂಭಾಗದ ಚರಂಡಿ ಮತ್ತು ಪಾರ್ಥೆನಿಯಂ ಗಿಡಗಳಿಗೆ ಪುರಸಭೆವತಿಯಿಂದ ಹಮ್ಮಿಕೊಂಡಿದ್ದ ಕ್ರಿಮಿ ನಾಶಕ ಔಷಧ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉಪಾಧ್ಯಕ್ಷ ಸತ್ಯನಾರಾಯಣ, ಸದಸ್ಯ ವೆಂಕಟೇಶ್, ಮುಖ್ಯಾಧಿಕಾರಿ ರೇಣುಕಾ, ಆರೋಗ್ಯಾಧಿಕಾರಿ ನವೀನ್ ಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.