ಕೋಲಾರ

ಹಂಗಾಮಿ ಅಧ್ಯಕ್ಷರ ಆಯ್ಕೆ

Published On :

ಶಿಡ್ಲಘಟ್ಟ: ತಾಪಂ ಹಂಗಾಮಿ ಅಧ್ಯಕ್ಷರಾಗಿ ಗಂಜಿಗುಂಟೆ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಗಂಜಿಗುಂಟೆ ತಾಪಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಆಯ್ಕೆಯಾಗಿದ್ದರು. ಈ ಹಿಂದೆ ಇದ್ದ ಅಧ್ಯಕ್ಷ ಯರಬಚ್ಚಪ್ಪ ಅವಧಿ ಮುಗಿದ ಹಿನ್ನೆಲೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸದಸ್ಯರಾದ ರಾಜಣ್ಣ, ವೇಣುಗೋಪಾಲ್, ವೆಂಕಟೇಶ್, ಬಶೆಟ್ಟಿಹಳ್ಳಿ ದ್ಯಾವಪ್ಪ, ಟಿ.ಎ. ಚಲಪತಿ, ನರಸಿಂಹಪ್ಪ ಅಭಿನಂದಿಸಿದರು.
ಹಾದಿ ತಪ್ಪಿದ ತನಿಖೆ; ಶಿಕ್ಷಕ
ಶಿಡ್ಲಘಟ್ಟ: ಮೇ 19ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ನನ್ನ ತಂದೆಯ ಪ್ರಕರಣವನ್ನು ದಿಕ್ಕು ತಪ್ಪಿಸಲಾಗುತ್ತಿದೆ. ನನ್ನ ವಿರುದ್ಧ ದಲಿತ ಸಂಘರ್ಷ ಸಮಿತಿ ಸದಸ್ಯರು ಠಾಣೆಯ ಮುಂದೆ ಪ್ರತಿಭಟನೆ ಮಾಡಿರುವುದು ಸರಿಯಲ್ಲವೆಂದು ಶಿಕ್ಷಕ ಮುನಿರಾಜು ಹೇಳಿಕೆ ನೀಡಿದ್ದಾರೆ. ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ತಿಮ್ಮರಾಯಪ್ಪ ಎಂಬುವವರು ಬೈರನಾಯಕನಹಳ್ಳಿಯ ಬಳಿ ಪಾಳುಬಾವಿಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಗೆ ದೂರು ನೀಡಿದ ಮುನಿರಾಜು ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹೇಳಿಕೆಯನ್ನು ನೀಡಿರುವ ಅವರು ಪೊಲೀಸ್ ಇಲಾಖೆ ಅಧಿಕಾರಿಗಳು ನಮ್ಮ ತಂದೆಯ ಪ್ರಕರಣದಲ್ಲಿ ವಿಳಂಬ ಮಾಡುತ್ತಿದ್ದರಿಂದ ನಾನು ಮೇಲಾಧಿಕಾರಿಗಳಿಗೆ ದೂರು ಕೊಟ್ಟಿದ್ದೇನೆಯೇ ಹೊರತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದಲ್ಲ. ಕಿಡಿಗೇಡಿಗಳು ತನಿಖೆಯ ಹಾದಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಪೊಲೀಸ್ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸಿದರೆ ಸತ್ಯಾಸತ್ಯಗಳು ಹೊರಬರುತ್ತವೆ ಎಂದು ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.