ಅಭಿವೃದ್ಧಿ ಕಾರ್ಯಗಳ ದಾಖಲಿಸಲು ನಿರ್ಧಾರ
ಕೋಲಾರ: ಶ್ರೀನಿವಾಸಪುರ ಕ್ಷೇತ್ರಕ್ಕೆ ಸರ್ಕಾರದಿಂದ ಬಿಡುಗಡೆ ಆಗಿರುವ ಹಾಗೂ ಮುಂದೆ ಬಿಡುಗಡೆ ಆಗುವ ಅನುದಾನ, ಅಭಿವೃದ್ಧಿ ಕಾಮಗಾರಿಗಳಿಗೆ ಖರ್ಚು ಮಾಡಿರುವ ಸಮಗ್ರ ಮಾಹಿತಿಯನ್ನು ದಾಖಲಿಸಿಡುವುದಕ್ಕೆ ನಿರ್ಧರಿಸಿರುವುದಾಗಿ ಶಾಸಕ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀನಿವಾಸಪುರ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ದಾಖಲೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳುವ ಕಾರ್ಯಕ್ರಮಗಳ ವಿವರಗಳನ್ನು ಸಾರ್ವಜನಿಕರ ಪರಿಶೀಲನೆಗಾಗಿ, ಮಾಹಿತಿಯಲ್ಲಿ ಲೋಪಗಳಿದ್ದಲ್ಲಿ, ಹಣದ ದುರುಪಯೋಗ ಕಂಡುಬಂದಲ್ಲಿ ಪ್ರತಿಕ್ರಿಯೆಗಾಗಿ ತಾಲೂಕು ಕಚೇರಿ, ತಾಪಂ ಕಚೇರಿ, ಪ್ರತಿ ಗ್ರಾಪಂ, ತಾಪಂ ಹಾಗೂ ಇನ್ನಿತರ ಸಾಮಾಜಿಕ ತಾಣಗಳಲ್ಲಿ ದಾಖಲೆಗಳನ್ನು ಇಡುವುದಾಗಿ ಹೇಳಿದರು.
ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಯಾರೂ ಸಹ ಮಾಹಿತಿ ಹಕ್ಕಿನ ಕಾಯಿದೆ ಅಡಿಯಲ್ಲಿ ದಾಖಲೆ ಸಂಗ್ರಹಿಸುವುದಕ್ಕೆ ಬದಲು ಪಾರದರ್ಶಕವಾಗಿ ಇಡಲಾಗುವುದು. ದಾಖಲೆಗಳನ್ನು ಪರಿಶೀರಿಸಲು ಮುಕ್ತ ಅವಕಾಶ ಕಲ್ಪಿಸುವುದರಿಂದ ಯಾವುದೇ ಅನುಮಾನ, ಗೊಂದಲಗಳಿಗೆ ಅವಕಾಶವಾಗುವುದಿಲ್ಲವೆಂದು ಅಭಿಪ್ರಾಯಪಟ್ಟರು.
ಸಹಕಾರ ಅಗತ್ಯ: ರಾಜಕಾರಣ ಚುನಾವಣೆಯ ಸಂದರ್ಭಕ್ಕೆ ಮಾತ್ರ ಸೀಮಿತವಾಗಬೇಕು. ಶ್ರೀನಿವಾಸಪುರ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯವರೆಗೆ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಸಲ್ಲದು, ಕ್ಷೇತ್ರಕ್ಕೆ ಸೇರಿದ ಎಲ್ಲಾ ಗ್ರಾಮಗಳ ಸಮಗ್ರ ಅಭಿವೃದ್ಧಿಯನ್ನು ರಾಜಕೀಯ ಬದಿಗೊತ್ತಿ ಅನುಷ್ಠಾನಕ್ಕೆ ತರಲು ಬಯಸಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವೆಂದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಜನ್ನಘಟ್ಟ ವೆಂಕಟಮುನಿಯಪ್ಪ, ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಸೈಯದ್ ಅಬ್ದುಲ್ ಸತ್ತಾರ್, ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಕಾಂಗ್ರೆಸ್ ಮುಖಂಡ ದಿಂಬಾಲ ನಾರಾಯಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

