ಕೋಲಾರ

ಕೆರೆಗಳ ಒತ್ತುವರಿಗೆ ಸರ್ಕಾರ ನಿರ್ಲಕ್ಷ್ಯ: ಆರೋಪ

Published On :

ಕೆಜಿಎಫ್: ಕೆರೆಗಳ ಒತ್ತುವರಿ ತೆರವುಗೊಳಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಮಿತಿ ರಚಿಸಲು ಹೈಕೋರ್ಟ್ ಆದೇಶ ನೀಡಿದೆ. ವಿಶೇಷ ಪ್ಯಾಕೇಜ್ ಮೂಲಕ ಬಂಗಾರಪೇಟೆ ಮತ್ತು ಕೆಜಿಎಫ್ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹುಲ್ಕೂರ್ ಹರಿಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒತ್ತುವರಿದಾರರನ್ನು ತೆರವುಗೊಳಿಸಿ ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ಆರು ತಿಂಗಳು ಜೈಲಿಗೆ ಕಳುಹಿಸಲು ಹೈಕೋರ್ಟ್ ಆದೇಶ ಮಾಡಿದದ್ದರೂ ಸಹ ಸರ್ಕಾರ ಹಾಗೂ ಜಿಲ್ಲಾಡಳಿತ ಮೌನವಾಗಿದೆ ಎಂದರು. ಜಿಲ್ಲಾ ಸಂಚಾಲಕ ಶ್ರೀನಿವಾಸ್ಗೌಡ ಮಾತನಾಡಿ, ಜಿಲ್ಲೆಯಲ್ಲಿ ಶೇ.60ರಷ್ಟು ಕೆರೆಗಳು ಒತ್ತುವರಿಯಾಗಿವೆ. ರಾಜಕಾಲುವೆಗಳ ದುರಸ್ತಿ ಮಾಡಿ ಕೆರೆ ನೀರಿನ ಮೂಲಗಳ ಅತಿಕ್ರಮಣ ನಿಯಂತ್ರಿಸಲು ಪ್ರತಿ ಜಿಲ್ಲೆಯಲ್ಲೂ ಸಹಾಯವಾಣಿ ತೆರೆಯಲು ಹೈಕೋರ್ಟ್ ಆದೇಶಿಸಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದರು. ಈ ವೇಳೆ ವಡ್ಡಹಳ್ಳಿ ಮಂಜುನಾಥ್, ದೊಡ್ಡಕಾರಿ ವಿಶ್ವನಾಥ್, ಸುಬ್ರಮಣಿ, ಹೇಮಾರೆಡ್ಡಿ, ಕಣ್ಣೂರು ಗಣೇಶ್, ಕ್ಯಾಸಂಬಳ್ಳ ಪ್ರತಾಪ್, ಕೆ.ಎಂ.ವೆಂಕಟರಾಮರೆಡ್ಡಿ, ಕೇಶವಮೂರ್ತಿ, ಮಂಜು, ಮುನಿರಾಜು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.