ಕೋಲಾರ

ಗೋಲಿಬಾರ್ ಖಂಡಿಸಿ ರಸ್ತೆ ತಡೆ

Published On :

ಬಾಗೇಪಲ್ಲಿ: ರೈತರ ಮೇಲೆ ಪೊಲೀಸರು ಗೋಲಿಬಾರ್ ಮತ್ತು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ಸಿಪಿಎಂ ಮತ್ತು ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
 ಪಟ್ಟಣದ ಸುಂದರಯ್ಯ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬಸ್ ನಿಲ್ದಾಣದ ಮುಂಭಾಗ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ರೆಡ್ಡಿ, ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಕೆಆರ್ಪಿಆರ್ ಜಿಲ್ಲಾ ಮುಖಂಡ ಚನ್ನರಾಯಪ್ಪ ಮತ್ತು ಸಿಪಿಎಂ ತಾ.ಸಮಿತಿ ಕಾರ್ಯದರ್ಶಿ ರಘುನಾಥರೆಡ್ಡಿ ಮಾತನಾಡಿದರು. ಚಂದ್ರಶೇಖರರೆಡ್ಡಿ,  ರಾಮಲಿಂಗಪ್ಪ, ರಮೇಶ್, ಹೇಮಚಂದ್ರ, ವಾಲ್ಮೀಕಿ ಅಶ್ವತ್ಥಪ್ಪ, ಆಂಜನೇಯರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.