ನಾಗರಿಕರ ಅಸಮಾಧಾನ
ಚಿಂತಾಮಣಿ: ನೀರಿನ ಪೈಪಿನಲ್ಲಿ ಒಳಚರಂಡಿ ನೀರು ಮಿಶ್ರಣಗೊಂಡು ಮನೆಗಳಿಗೆ ಬರುತ್ತಿರುವ ನಳ ನೀರಿನ ದುರ್ವಾಸನೆಯಿಂದ ನಾಗರೀಕರು ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ 22ನೇ ವಾರ್ಡಿನ ಗೋಷಗಲ್ಲಿಯಲ್ಲಿ ಕಳೆದ ಹಲವು ತಿಂಗಳಿನಿಂದ ಕುಡಿವ ನೀರಿನ ಪೈಪಿನಲ್ಲಿ ಒಳಚರಂಡಿ ನೀರು ಮಿಶ್ರಣಗೊಂಡು ಬರುತ್ತಿದೆ. ಇದರಿಂದ ಸಾಂಕ್ರಾಮಿಕರ ರೋಗಗಳು ಹರಡುವ ಭೀತಿ ಭಯಗೊಂಡು ನಾಗರೀಕರನ್ನು ಕಾಡುತ್ತಿದೆ. ಈ ಬಗ್ಗೆ ಸ್ಥಳೀಯ ನಗರಸಭೆ ಸದಸ್ಯ ಸುಜಾತಮ್ಮ ಶಿವಣ್ಣನವರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ನಿವಾಸಿಗಳು ನೀರಿನ ಸಮಸ್ಯೆಯಿಂದ ಜನಪ್ರತಿನಿಧಿಗಳಿಗೆ ಹಾಗೂ ನಗರಸಭೆ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ. ಜನಪ್ರತಿನಿಧಿಗಳು ಇತ್ತ ಗಮನಹರಿಸಿ 22ನೇ ವಾರ್ಡಿನ ನಿವಾಸಿಗಳ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.
ಗಿಡ ನೆಡುವ ಸಪ್ತಾಹ
ಚಿಕ್ಕಬಳ್ಳಾಪುರ: ಪರಿಸರ ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಗಿಡಗಳನ್ನು ಬೆಳೆಸುವ ಕಾರ್ಯವು ಆಮೆಗತಿಯಲ್ಲಿ ಸಾಗುತ್ತಿದೆ. ಆದರೆ, ಮರಗಿಡಗಳನ್ನು ಕಡಿದು ಹಾಕುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಬೆಳ್ಳುಂಕೆ ವಿಷಾದ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಅರಣ್ಯ ಇಲಾಖೆ, ವಕೀಲರ ಸಂಘ ಆಯೋಜಿಸಿದ್ದ ಗಿಡಗಳನ್ನು ನೆಡುವ ಸಪ್ತಾಹ ಕ್ಕೆ ಚಾಲನೆ ನೀಡಿ ಮಾತನಾಡಿದರು. ಗಿಡ ನೆಡುವ ಸಪ್ತಾಯ ಕಾರ್ಯಕ್ರಮದ ಮೂಲಕ ಮರಗಿಡಗಳ ಬಗ್ಗೆ ಜಾಗೃತಿ ಮೂಡಿಸಿ ಸರ್ಕಾರಿ ಕಚೇರಿ ಅವರಣದಲ್ಲಿ ಸಸಿಗಳನ್ನು ನೆಡಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

