ಕೋಲಾರ

ಬರ ಪರಿಹಾರ ಕಾಮಗಾರಿಗಳಿಗೆ ಒತ್ತಾಯಿಸಿ ಪ್ರತಿಭಟನೆ

Published On :

ಕೋಲಾರ/ಶ್ರೀನಿವಾಸಪುರ: ಮಳೆ ಕೈಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಲಾರ ಮತ್ತು ಶ್ರೀನಿವಾಸಪುರದಲ್ಲಿ ಪ್ರತಿಭಟನೆ ನಡೆಯಿತು. ಕೋಲಾರ ತಾಲೂಕು ಕಚೇರಿಯ ಮುಂದೆ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಯ್ಯಾರೆಡ್ಡಿ ಹಾಗೂ ಶ್ರೀನಿವಾಸಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಸೂರ್ಯನಾರಾಯಣ ನೇತೃತ್ವ ವಹಿಸಿದ್ದರು. ಬರಗಾಲ ಹಿನ್ನಲೆಯಲ್ಲಿ ಸರ್ಕಾರ ರೈತರಿಗೆ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ನೀಡಬೇಕು, ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿದರು. ಕೋಲಾರದಲ್ಲಿ ಸಂಘಟನೆಯ ಮುಖಂಡರಾದ ಕುರ್ಕಿ ದೇವರಾಜ್, ಕೃಷ್ಣೇಗೌಡ, ಶ್ರೀನಿವಾಸಪುರದಲ್ಲಿ ಮುಖಂಡರಾದ ಪಿ.ಆರ್.ನವೀನ್, ವೆಂಕಟರೆಡ್ಡಿ. ನಾಗೇಶ್, ಆನಂದ್, ಕೆ.ವಿ. ಬಂಗಾರಪ್ಪ, ನಾಗಭೂಷಣ. ಸುಂದರಮ್ಮ ಜಿ.ಕೃಷ್ಣಪ್ಪ, ಸೀತಮ್ಮ, ಸಿ.ಎಂ.ಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.