ಬಾಲಕಿ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ: ಭರವಸೆ
ಮಾಲೂರು: ಮಹಿಳೆಯರು ಸ್ವಯಂ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಹೇಳಿದರು.
ಅವರು ಕಳೆದ ವಾರ ತಾಲೂಕಿನ ಕುಪ್ಪೂರು ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಹಾಗೂ ಆಕೆಯ ಪೋಷಕರಿಗೆ ಸಾಂತ್ವನ ಹೇಳಿದ ಅವರು, ಪತ್ರಕರ್ತರೊಡನೆ ಮಾತನಾಡುತ್ತಾ, ಜಿಲ್ಲೆಯಲ್ಲಿ ಕಳೆದ ವಾರ ಎರಡು ಅತ್ಯಾಚಾರ ಪ್ರಕರಣ ದಾಖಲಾಗಿವೆ ಎಂದರು.
ಸರ್ಕಾರಕ್ಕೆ ವರದಿ: ಈ ತಾಲೂಕಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರಿಂದ ಮಾಹಿತಿ ಪಡೆಯಲಾಗಿದೆ. ಇದರ ಜತೆಯಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆದು ವರದಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ಅವರು ತಿಳಿಸಿದರು. ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಗ್ರಾಮ ಅಥವಾ ತಾಲೂಕಿನಲ್ಲಿ ವ್ಯಾಸಂಗ ಮುಂದುವರೆಸಲು ಮುಜುಗರ ಉಂಟಾಗಬಹುದೆಂಬ ದೃಷ್ಟಿಯಿಂದ ಆಕೆಯ ವಿದ್ಯಾಭ್ಯಾಸವನ್ನು ಬೇರಡೆ ಉಚಿತವಾಗಿ ಮುಂದುವರೆಸಲು ಸರ್ಕಾರದ ವತಿಯಿಂದ ಸಹಕಾರ ನೀಡಿಸುವುದಾಗಿ ತಿಳಿಸಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪುಪ್ಬ ಶಕುಂತಲ, ಕಾನೂನು ಅಧಿಕಾರಿ ಅನಿತಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

