ಬೈಕ್ ಡಿಕ್ಕಿ: ಪಾದಚಾರಿ ಸಾವು
ಬಂಗಾರಪೇಟೆ: ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ತಾಲೂಕಿನ ಹುನುಕುಲದೊಡ್ಡಿ ಗ್ರಾಮದ ನಾರಾಯಣಸ್ವಾಮಿ (48) ಪಟ್ಟಣದಲ್ಲಿ ಕೆಲಸ ಮುಗಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಗಂಗಾ ಲಾಡ್ಜ್ ಬಳಿ ಪಟ್ಟಣದ ಸಿ.ರಹಿಂ ಕಾಂಪೌಂಡ್ ನಿವಾಸಿ ನಯಾಜ್ ಅಹ್ಮದ್ ದ್ವಿಚಕ್ರ ವಾಹನದಲ್ಲಿ ರಭಸವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿಯನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಜೂಜಾಟ: ನಾಲ್ವರ ಬಂಧನ: ಪಟ್ಟಣದ ದೇಶಿಹಳ್ಳಿ ಬಳಿಯಿರುವ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಜೂಜಾಟದಲ್ಲಿ ನಿರತರಾಗಿದ್ದ ನಾಲ್ವರನ್ನು ಪಿಎಸ್ಐ ರವಿಕುಮಾರ್ ದಾಳಿ ಮಾಡಿ ಬಂಧಿಸಿ, 4500 ನಗದು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

