ಕೋಲಾರ

ಮಚ್ಚಿನಿಂದ ಕೊಚ್ಚಿ ಕೊಲೆ

Published On :

ಬಂಗಾರಪೇಟೆ: ಹಾಡಹಗಲೇ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಆಂಧ್ರಪ್ರದೇಶದ ಗಡಿ ಭಾಗದಲ್ಲಿನ ತನಿಮಗಡು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾಗಿರುವ ವ್ಯಕ್ತಿಯನ್ನು ರಾಮು (55) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗಿನ ಜಾವ 8 ಗಂಟೆ ಸುಮಾರಿಗೆ ಮೃತ ರಾಮು ತಮ್ಮ ದ್ವಿಚಕ್ರ ವಾಹನದಲ್ಲಿ ಗ್ರಾಮದಿಂದ ಹೊರಗಡೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬಳಿಕ ರಸ್ತೆ ಬದಿಯಲ್ಲೇ ಬಿಸಾಡಿ ಪರಾರಿಯಾಗಿದ್ದಾರೆ. ಮೃತ ರಾಮು ಗ್ರಾಮದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನ ಸಹೋದರ ಆಕಸ್ಮಿಕವಾಗಿ ಇದೇ ರಸ್ತೆಯಲ್ಲಿ ಹೋಗುತ್ತಿದ್ದಾಗ ತನ್ನ ಅಣ್ಣ ಸತ್ತು ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ವೆಂಕಟಾಚಲಪತಿ ಭೇಟಿ ನೀಡಿ ಪರಿಶೀಲಿಸಿ ಆರೋಪಿಗಳ ಪತ್ತೆ ವಿಶೇಷ ತಂಡ ರಚಿಸಿದ್ದಾರೆ. ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಎರಡು ಮನೆಗೆ ಕನ್ನ ಹಾಕಿದ ಕಳ್ಳರು
ಕೆಜಿಎಫ್: ಮನೆಯ ಬಾಗಿಲನ್ನು ಮೀಟಿ ಬೀರುವಿನಲ್ಲಿಟ್ಟಿದ್ದ ಲಕ್ಷಾಂತರ ಚಿನ್ನದ ಒಡವೆಗಳು ಸೇರಿದಂತೆ ಇತರೆ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೌತಂನಗರದ 3ನೇ ಕ್ರಾಸ್ ರಸ್ತೆಯ ನಿವಾಸಿ ಪ್ರದೀಪ್ ಎಂಬುವರು ಬೆಂಗಳೂರಿನ ಐಟಿಬಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಪತ್ನಿ ದಿವ್ಯಾಗೆ ಜ್ವರ ಬಂದಿದ್ದರಿಂದ ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಆಂಡ್ರಸನ್ಪೇಟೆಯಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದು, ಭಾನುವಾರ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಭಾನುವಾರ ರಾತ್ರಿಯೇ ಈ ಘಟನೆ ನಡೆದಿದ್ದು, 3 ಲಕ್ಷ ಮೌಲ್ಯದ ಒಡವೆ, ಲ್ಯಾಪ್ಟಾಪ್, ಮೊಬೈಲ್ ಫೋನ್, ಡಿಜಿಟಲ್ ಕ್ಯಾಮೆರಾ, ಐ ಪಾಡ್ ಹಾಗೂ 10 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಇದೇ ವೇಳೆ, ಇದೇ ಮನೆಯ ಮುಂಭಾಗದ ಡಾ.ಲಿಂಗಮ್ ಎಂಬುವವರ ಮನೆಯ ಮೇಲಿನ ರೂಂ ಬಾಗಿಲು ಮುರಿದು, ರೇಷ್ಮೆ ಸೀರೆಗಳನ್ನು ದೋಚಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.