ಸೌಲಭ್ಯಕ್ಕೆ ಆಗ್ರಹಿಸಿ ದಲಿತ ಸಮಾಜ ಸೇನೆ ಪ್ರಮುಖರಿಂದ ಪುರಸಭೆ ಮುತ್ತಿಗೆ
ಬಂಗಾರಪೇಟೆ: ಪಟ್ಟಣದಲ್ಲಿ ಕುಡಿಯುವ ನೀರು, ರಸ್ತೆ ಹಾಗೂ ಚರಂಡಿಗಳು ಸಮರ್ಪಕವಾಗಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಮಾಜ ಸೇನೆ ಮುಖಂಡರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪಟ್ಟಣದಲ್ಲಿ ಇದುವರೆಗೂ ಕೈಗೊಂಡಿರುವ ಸಿಮೆಂಟ್ ರಸ್ತೆಗಳು ತೀವ್ರ ಕಳಪೆ ಕಾಮಗಾರಿಯಾಗಿದ್ದು ರಸ್ತೆ ನಿರ್ಮಾಣವಾದ ತಿಂಗಳಲ್ಲೇ ಸಿಮೆಂಟ್ ಮಾಯವಾಗಿ ಬರೀ ಜಲ್ಲಿಗಳು ಕಾಣಿಸಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಆದರೂ ಪುರಸಭೆ ಕಳಪೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದೆ. ಅವ್ಯವಸ್ಥೆಯಲ್ಲಿ ಕೂಡಿರುವ ಸಿಮೆಂಟ್ ರಸ್ತೆಗಳನ್ನು ಕೂಡಲೇ ದುರಸ್ಥಿಗೊಳಿಸಬೇಕು, ಪಟ್ಟಣದ ಸ್ಲಂ ಬಡಾವಣೆಗಳಾದ ಇಂದಿರಾ, ಆಶ್ರಯ ಬಡಾವಣೆ ಮತ್ತು ನಗರದಲ್ಲಿ ತಿಂಗಳಿಂದ ಕುಡಿಯುವ ನೀರು ಪೂರೈಕೆಯಾಗದೆ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಪುರಸಭೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದನ್ನು ನೋಡಿದರೆ ಇಲ್ಲಿ ಪುರಸಭೆ ಇದೆಯೋ ಇಲ್ಲವೋ ಎಂಬ ಅನುಮಾನ ಬರುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಲ್ಲಿ 5ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ವರ್ಷದ ಹಿಂದೆ ಚಾಲನೆ ನೀಡಿದರೂ ಕಾಮಗಾರಿ ಮಾತ್ರ ಪ್ರಾರಂಭವಾಗಿಲ್ಲ. ಚರಂಡಿಗಳಲ್ಲಿ ತ್ಯಾಜ್ಯ ಹಾಗೂ ಮಳೆ ನೀರು ತುಂಬಿ ಹಲವು ರೋಗಗಳು ಹರಡುವಂತಾಗಿದೆ. ಇಷ್ಟಾದರೂ ಪುರಸಭೆ ಮುನ್ನಚ್ಚರಿಕೆ ಕ್ರಮ ವಹಿಸದೆ ಕಡೆಗಣಿಸಿದೆ ಎಂದು ದೂರಿದರು. ಈ ಕೂಡಲೇ ಕುಡಿಯುವ ನೀರು, ರಸ್ತೆ ಹಾಗೂ ಚರಂಡಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಪುರಸಭೆ ಮುಂದೆ ಅನಿರ್ದಿಷ್ಟ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿ ಮುಖ್ಯಾಧಿಕಾರಿ ಜಹೀರ್ ಅಬ್ಬಾಸ್ ಅವರಿಗೆ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

