ಕೋಲಾರ

ಮುಳಬಾಗಲು ಬಸ್ ನಿಲ್ದಾಣ ಲೋಕಾರ್ಪಣೆ ಆ.15ಕ್ಕೆ

Published On :

ಮುಳಬಾಗಲು: ಪಟ್ಟಣದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದ್ದು ಆ.15ರಂದು ಲೋಕಾರ್ಪಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ.
ತಾಲೂಕಿನ ಜನತೆಯ ಬಹುದಿನಗಳ ಕನಸು ನನಸಾಗುವ ಕಾಲ ಕೂಡಿ ಬಂದಿದ್ದು ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ನೂತನ ಬಸ್ ನಿಲ್ದಾಣಕ್ಕೆ ಬರೋಬ್ಬರಿ 2.75 ಕೋಟಿ ವೆಚ್ಚ ಮಾಡಲಾಗಿದೆ. 2013, ಮಾ.30ರಂದು ಹಿಂದಿನ ಬಿಜೆಪಿ ಸರ್ಕಾರ ಅನುದಾನ ಮಂಜೂರು ಮಾಡಿತ್ತು. ಸ್ಯಾಟ್ಲೈಟ್ ಬಸ್ ನಿಲ್ದಾಣದ ಮಾದರಿಯಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಪ್ರಯಾಣಿಕರಿಗೆ ಎಲ್ಲ ರೀತಿಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದಿಂದ ನೆರೆ ರಾಜ್ಯಗಳಿಗೂ ಬಸ್ ಸೌಕರ್ಯ ಕಲ್ಪಿಸಲು ಉದ್ದೇಶಿಸಲಾಗಿದೆ.
ಪುರಸಭೆ ವ್ಯಾಪ್ತಿಗೆ ಸೇರಿದ್ದ ಹಳೆಯ ಬಸ್ ನಿಲ್ದಾಣದಲ್ಲೇ ನೂತನ ಬಸ್ ನಿಲ್ದಾಣ ನಿರ್ಮಿಸಲಾಗಿದೆ. 38 ಗುಂಟೆ ವಿಸ್ತೀರ್ಣದಲ್ಲಿ ಬಸ್ ನಿಲ್ದಾಣಕ್ಕೆ ಜಾಗ ಕಲ್ಪಿಸಲಾಗಿದ್ದು ನೂತನ ಬಸ್ ನಿಲ್ದಾಣದಿಂದ ತಾಲೂಕಿನ ಹಾಗೂ ಹೊರಗಿನವರಿಗೆ ಹೆಚ್ಚಿನ ಅನುಕೂಲವಾಗಲಿದೆ. ರಾಜ್ಯ ರಸ್ತೆ ಸಾರಿಗೆ ಎಂಜನಿಯರ್ ಶಿವಕುಮಾರ್ “OÚ«Ú­sÚ®Úúڒ¥æàM¦Væ ಮಾತನಾಡಿ, ಬಸ್ ನಿಲ್ದಾಣ ಆ.15ರ ವೇಳೆಗೆ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಗುತ್ತಿಗೆದಾರರು ಸಂಪೂರ್ಣ ಸಹಕಾರ ನೀಡಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.