ಕೋಲಾರ

ಕೇಂದ್ರದ ವಿರುದ್ಧ ಶೀಘ್ರ ಹೋರಾಟ

Published On :

ತುಮಕೂರು: ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳಲ್ಲಿ ಬದಲಾವಣೆ ತರಲು ಹೊರಟಿರುವ ಹಿನ್ನೆಲೆಯಲ್ಲಿ ಕಾರ್ಮಿಕರ ಐಕ್ಯ ಹೋರಾಟಗಳನ್ನು ಮುನ್ನಡೆಸುವ ಕುರಿತು ಜನರಲ್ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ, ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕೌನ್ಸಿಲ್ ಸಭೆಗೆ ಪೂರ್ವಭಾವಿಯಾಗಿ ರಾಜ್ಯಾದ್ಯಂತ ಒಟ್ಟು ಐದು ಜಾಥಾಗಳನ್ನು ಸಿಐಟಿಯು ರಾಜ್ಯ ಸಮಿತಿ ಹಮ್ಮಿಕೊಂಡಿದೆ. ಕಾರವಾರ, ಚಾಮರಾಜನಗರ, ಕೆಜಿಎಫ್ ಬೆಳಗಾವಿ, ಗುಲ್ಬರ್ಗದಿಂದ ಜಾಥಾವು ಹೊರಟು ಬಳ್ಳಾರಿ ತಲುಪಲಿದೆ. ಜುಲೈ 11ರಿಂದ 14ರವರೆಗೆ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿ ಸಿಐಟಿಯು ಅಖಿಲ ಭಾರತ ಜನರಲ್ ಕೌನ್ಸಿಲ್ ಸಭೆ ನಡೆಯಲಿದ್ದು, ಸಭೆಯಲ್ಲಿ ಆಮೂಲಾಗ್ರವಾಗಿ ಚರ್ಚಿಸಲಾಗುವುದು ಎಂದರು.
ಕೆಜಿಎಫ್‌ನಿಂದ ಹೊರಡುವ ಸವರಿದಾಸ್ ಜಾಥಾ ಜು.12ರಂದು ತುಮಕೂರಿಗೆ ಬರಲಿದೆ. ಬಳಿಕ ಕೊರಟಗೆರೆ, ಮಧುಗಿರಿ, ಪಾವಗಡದ ಮೂಲಕ ಚಳ್ಳಕೆರೆ ಮಾರ್ಗವಾಗಿ ಬಳ್ಳಾರಿ ತಲುಪಲಿದೆ ಎಂದು ಅವರು ತಿಳಿಸಿದರು.

ಓವರ್‌ಹೆಡ್ ಟ್ಯಾಂಕ್ ನೀರು ಪೋಲು
ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್‌ನಲ್ಲಿನ ಶೆಟ್ಟಿಗೆರೆ ರಸ್ತೆಯಲ್ಲಿರುವ ಓವರ್ ಹೆಡ್  ಟ್ಯಾಂಕ್‌ನಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಟ್ಯಾಂಕ್‌ನಿಂದ ನೀರನ್ನು ಸರಬರಾಜು ಮಾಡಲು ಅಳವಡಿಸಿರುವ ಪೈಪ್‌ಗಳ ವಾಲ್ವ್‌ಗಳು ಕಿತ್ತು ಹೋಗಿದ್ದು ಅದರಿಂದ ನೀರು ವ್ಯರ್ಥವಾಗಿ ಹರಿದು ಚರಂಡಿ ಸೇರುತ್ತಿದೆ.  ಕಳೆದ ಎರಡು ದಿನಗಳಿಂದಲೂ ನೀರು ಹರಿಯುತ್ತಿದ್ದು ಒಂದು ದಿನದಲ್ಲಿ 1 ಲಕ್ಷ ಲೀಟರ್  ನೀರು ವ್ಯರ್ಥವಾಗಿದೆ. ಪ್ರಸ್ತುತ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿರುವುದರ ನಡುವೆ ಅಧಿಕಾರಿಗಳು ನೀರು ಪೋಲಾಗುವುದನ್ನು ತಡೆಯುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.