ಕೋಲಾರ

ದಲಿತರ ಮೇಲೆ ಸವರ್ಣೀಯರ ಹಲ್ಲೆ

Published On :

ಶಿಡ್ಲಘಟ್ಟ: ಸವರ್ಣೀಯರು ಹಾಗೂ ದಲಿತರ ಮಧ್ಯೆ ಸಂಭವಿಸಿದ ಘರ್ಷಣೆಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ತಲದುಮ್ಮನಹಳ್ಳಿ ಗ್ರಾಮದ ನಿವಾಸಿಗಳಾದ ಟಿ.ಆರ್.ಸುನೀಲ್, ಟಿ.ಆರ್.ಅನಿಲ್, ನಾರಾಯಣಮ್ಮ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಸೋಮವಾರ ದಲಿತ ಸಮುದಾಯಕ್ಕೆ ಸೇರಿದ್ದ ಯುವಕರು ಗ್ರಾಮದ ಚೌಡೇಶ್ವರಿ ದೇವಾಲಯದ ಬಳಿ ಕ್ರಿಕೆಟ್ ಆಟವಾಡುತ್ತಿದ್ದರು. ಆಗ ಸವರ್ಣೀಯರ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಬಂದು ದಲಿತರು ಈ ದೇವಸ್ಥಾನದ ಹತ್ತಿರಕ್ಕೆ ಬರಬಾರದು ಎಂದು ಅಡ್ಡಿಪಡಿಸಿ ವಿಕೆಟ್ ಕಿತ್ತುಕೊಂಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಮಧ್ಯಪ್ರವೇಶಿದ ಕೆಲವರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಸವರ್ಣೀಯ ಸಮುದಾಯದ ಯುವಕರು ರಾತ್ರಿ ಸುಮಾರು 08.30ರ ವೇಳೆಗೆ ಗುಂಪು ಕಟ್ಟಿಕೊಂಡು ಬಂದು ಮನೆಯಲ್ಲಿ ಮಲಗಿದ್ದ ಸುನೀಲ್‌ನನ್ನು ಹೊರಗೆ ಎಳೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ. ಇದನ್ನು ಗಮನಿಸಿದ ಸುನೀಲ್ ಸೋದರ ಅನಿಲ್ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಅವನನ್ನೂ ಥಳಿಸಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಯುವಕರನ್ನು ಥಳಿಸುವುದನ್ನು ಕಂಡ ಅಜ್ಜಿ ನಾರಾಯಣಮ್ಮ ಕಿರುಚಿಕೊಂಡಾಗ ನೆರೆಯವರು ಧಾವಿಸಿದ್ದಾರೆ. ಆಗ ಸವರ್ಣೀಯ ಸಮುದಾಯದ ಯುವಕರು ಪರಾರಿಯಾಗಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಗ್ರಾಮಾಂತರ ಠಾಣೆ ಪೋಲಿಸರು ಕಿಶೋರ್, ಹರೀಶ್, ಅರುಣ್, ಪಿಲ್ಲಪ್ಪಯ್ಯ, ಶೌರೀಶ್, ನಾಗೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.