ಕೋಲಾರ

ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

Published On :

ಶಿಡ್ಲಘಟ್ಟ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ 2012-13ನೇ ಸಾಲಿನ ಎಸ್‌ಎಫ್‌ಸಿ ನಿಧಿಯಲ್ಲಿ ಶೇ.7.25 ಯೋಜನೆಯಡಿ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್‌ಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಯೋಜನಾ ನಿರ್ದೇಶಕ ನಾಗರಾಯಜ್ಯ ಶೆಟ್ಟಿ, ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪಬೇಕಾದರೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಪುರಸಭೆಯಲ್ಲಿ ಕೆಲಸಗಳು ವಿಳಂಬವಾಗುತ್ತಿವೆ. ಬಡತನ ನಿರ್ಮೂಲನೆ ಮಾಡುವಲ್ಲಿ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದರು.
ಸ್ನಾತಕೋತ್ತರ ಮಾಡುತ್ತಿರುವ ಒಟ್ಟು 5 ವಿದ್ಯಾರ್ಥಿಗಳಿಗೆ ತಲಾ 6000, 31 ಪದವಿ ವಿದ್ಯಾರ್ಥಿಗಳಿಗೆ ತಲಾ 4000, 41 ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 3000, 14 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತಲಾ 2000 ಸಾವಿರ ವಿತರಿಸಲಾಯಿತು.
ಪುರಸಭಾ ಅಧ್ಯಕ್ಷೆ ಮುಷ್ಟರಿ ತನ್ವೀರ್, ಮುಖ್ಯಾಧಿಕಾರಿ ರಾಮ್ ಪ್ರಕಾಶ್, ಸದಸ್ಯರಾದ ಚಿಕ್ಕಮುನಿಯಪ್ಪ, ಬಾಲಕೃಷ್ಣ, ರಾಘವೇಂದ್ರ, ಕೇಶವಮೂರ್ತಿ, ನಂದುಕಿಶನ್, ವೆಂಕಟಸ್ವಾಮಿ, ಮುಖಂಡರಾದ ತನ್ವೀರ್, ರಮೇಶ್, ಮುಸ್ತು, ಮಂಜುನಾಥ್, ಸಾಧಿಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.