ಅನಧಿಕೃತ ಶಾಲೆ: ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಶಾಲೆ ನಡೆಸುತ್ತಿರುವವರ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೋಲಾರದ ಬಾಲ್ಡ್ವಿನ್ ಶಾಲೆ ಇಲಾಖೆ ಅನುಮತಿ ಪಡೆಯದೇ ಅನಧಿಕೃತವಾಗಿ ಶಾಲೆ ಆರಂಭಿಸಿದ ಅರ್ಜಿಗೆ ಸಂಬಂಧಪಟ್ಟಂತೆ ನ್ಯಾ. ಎ.ಎಸ್. ಬೋಪಣ್ಣ ವಿಚಾರಣೆ ನಡೆಸಿದರು. ಶಾಲೆ ಪರ ವಕೀಲರು, ಬೆಂಗಳೂರಿನಲ್ಲೂ ಈ ರೀತಿಯಾಗಿ ಅನಧಿಕೃತ ಶಾಲೆಗಳು ಸಾಕಷ್ಟು ಪ್ರಮಾಣದಲ್ಲಿವೆ. ಅವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು ನಗರದಲ್ಲಿ ಸುಮಾರು 24 ಅನಧಿಕೃತ ಶಾಲೆ ಇರುವುದಾಗಿ ಅಂಕಿ ಅಂಶ ನೀಡಿದ ಹಿನ್ನೆಲೆಯಲ್ಲಿ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು. ಅನಧಿಕೃತವಾಗಿ ಶಾಲೆ ಆರಂಭಿಸಿರುವುದಾಗಿ ಕೋಲಾರದ ಬಾಲ್ಡ್ವಿನ್ ಶಾಲೆಗೆ ಡಿಡಿಪಿಐ ಶಾಲೆ ಬಂದ್ ಮಾಡುವಂತೆ ಈ ಹಿಂದೆ ನೋಟಿಸ್ ಜಾರಿ ಮಾಡಿದ್ದರು. ಡಿಡಿಪಿಐ ಜಾರಿ ಮಾಡಿದ್ದ ನೋಟಿಸ್ಗೆ ತಡೆಯಾಜ್ಞೆ ನೀಡುವಂತೆ ಕೋರಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

