ಮುಳಬಾಗಲು ಸಾಹಿತ್ಯ ಜಾತ್ರೆಗೆ ವೆಂಕಟಮುನಿ ಸಾರಥಿ
ಮುಳಬಾಗಲು: ತಾಲೂಕಿನ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನ ಜು.16ರಂದು ಪಟ್ಟಣದ ಡಿವಿಜಿ ಕನ್ನಡ ಗಡಿ ಭವನದಲ್ಲಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಜೆ.ನಾಗರಾಜ್ ತಿಳಿಸಿದರು.
ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ ಗುರುವಾರ ಮಾತನಾಡಿ, ಎರಡು ದಿವಸಗಳ ಕಾಲ ನಡೆಸಲು ಹಿಂದೆ ನಿರ್ಧರಿಸಲಾಗಿತ್ತು. ಆದರೆ ಬರಗಾಲದ ಹಿನ್ನಲೆ ಒಂದು ದಿವಸಕ್ಕೆ ಸೀಮಿತಗೊಳಿಸಲಾಗಿದೆ. ತಾಲೂಕಿನ ಎಚ್.ಗೊಲ್ಲಹಳ್ಳಿಯ ಜಾನಪದ ತಜ್ಞ, ಬರಹಗಾರ, ಅನುವಾದಕ, ರಾಷ್ಟ್ರಪ್ರಶಸ್ತಿ ವಿಜೇತರಾದ 74 ವರ್ಷದ ವಿ.ಮುನಿವೆಂಕಟಪ್ಪ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು 50 ಪಾವತಿಸಬೇಕಾಗಿದೆ. 7000 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಪೂರ್ಣಕುಂಭ ಸ್ವಾಗತ, ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣೆಗೆ ನಡೆಸಲಾಗುವುದು. 16ರಂದು ಬೆಳಗ್ಗೆ ರಾಷ್ಟ್ರ ಹಾಗೂ ಪರಿಷತ್ ಧ್ವಜಾರೋಹಣ ಮಾಡಿದ ನಂತರ ನಮ್ಮ ನಡುವಿನ ಸಮಸ್ಯೆಗಳನ್ನು ಕುರಿತು ನಡೆಯುವ ವಿಚಾರಗೋಷ್ಠಿ ಸಾಹಿತಿ ಕೆ.ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವುದು. ಬಳಿಕ ತಾಲೂಕಿನಲ್ಲಿ ಎಲೆ ಮರೆ ಕಾಯಿಯಂತೆ ಇರುವ ಯುವ ಕವಿಗಳಿಗೆ ಸನ್ಮಾನ, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಕನ್ನಡ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು. ಸಮ್ಮೇಳದಲ್ಲಿ ಭಾಗವಹಿಸುವ ನೌಕರರಿಗೆ ಒಒಡಿ ಸೌಲಭ್ಯವಿರುವುದು ಎಂದರು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ಶಾಸಕರನ್ನು ಆಯ್ಕೆ ಮಾಡಲಾಗಿದೆ. ಖ್ಯಾತ ಜನಪದ ತಜ್ಞ ಡಾ.ಸಂಧ್ಯಾರೆಡ್ಡಿ ಕೆ.ಆರ್. ಅವರು ಕಾರ್ಯಕ್ರಮ ಉದ್ಪಾಟಿಸುವರು. ತಾಲೂಕು ಕಸಾಪ ಅಧ್ಯಕ್ಷ ಇ.ಶ್ರೀನಿವಾಸಗೌಡ ಮಾತನಾಡಿ, ಅಂದು ವಿಠ್ಠಲ ನಾರಾಯಣಸ್ವಾಮಿ ದೇವಾಲಯದಿಂದ ವಿವಿಧ ಕಲಾತಂಡಗಳ ಮೆರವಣೆಗೆ ನಡೆಸಲಾಗುವುದು. ಸಮ್ಮೇಳನದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ, ಡಾ.ವೆಂಕಟರಾಮಪ್ಪ ಅವರನ್ನು ಸನ್ಮಾನಿಸಲಾಗುವುದು. ಸಂಜೆ ನಾಟಕ ಪ್ರದರ್ಶನವಿದೆ ಎಂದರು. ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿ.ಜನಾರ್ಥನ್, ಶಂಕರ್ ಕೇಸರಿ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

