ಕೋಲಾರ

ಒಳ್ಳೆ ಕಾಲ ಬರುತ್ತದೆಂಬ ನಂಬಿಕೆ ಹುಸಿ ಮಾಡಲಿಲ್ಲ

Published On :

ಕೋಲಾರ: 'ಒಳ್ಳೆ ಕಾಲ ಬರುತ್ತದೆ' ಎಂದು ದೇಶದ ಜನರಿಗೆ ಭರವಸೆ ನೀಡಿ ಪ್ರಚಂಡ ಬಹುಮತ ಗಳಿಸಿದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಗುರುವಾರ ಮಂಡಿಸಿದ ಬಜೆಟ್ ಆಶಾದಾಯಕವಾಗಿದ್ದರೂ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ಸ್ಪಷ್ಟ ಚಿತ್ರಣ ಪ್ರಕಟಿಸಿಲ್ಲವೆಂಬ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಾಣಿಜೋದ್ಯಮಿ ಶ್ರೀನಿವಾಸಪುರದ ಶ್ರೀನಿವಾಸಮೂರ್ತಿ ಮಾತನಾಡಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಆದಾಯ ತೆರಿಗೆ ಮಿತಿಯನ್ನು 3 ಲಕ್ಷಕ್ಕೆ ನಿಗದಿ ಮಾಡುವರೆಂಬ ನಂಬಿಕೆ ಇತ್ತು ಎಂದಿದ್ದಾರೆ.
ಈ ಹಿಂದಿನ ಯುಪಿಎ ಸರ್ಕಾರ 1.50 ಲಕ್ಷವಿದ್ದ ಆದಾಯ ತೆರಿಗೆ ಮಿತಿಯನ್ನು 2 ಲಕ್ಷಕ್ಕೆ ಏರಿಕೆ ಮಾಡಿತ್ತು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆದಾಯ ತೆರಿಗೆ ಮಿತಿಯನ್ನು 3 ಲಕ್ಷಕ್ಕೆ ಏರಿಕೆ ಮಾಡಿದ್ದರೆ ಅನುಕೂಲವಾಗುತ್ತಿತ್ತು. ಆದರೆ, 50 ಸಾವಿರ ಹೆಚ್ಚಿಸಿ, 2.50 ಲಕ್ಷಕ್ಕೆ ಮಿತಿಗೊಳಿಸಿದೆ. ಇದು ನಿರಾಸೆ ಮೂಡಿಸಿದೆಯಾದರೂ ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಕೋಲಾರ ನಗರಸಭೆ ಅಧ್ಯಕ್ಷ ಮುಬಾಕರ್ ಪ್ರತಿಕ್ರಿಯಿಸಿ, “ÈæàÞ¦ ಸರ್ಕಾರದ ಬಜೆಟ್‌ನಲ್ಲಿ ನೀಡಿರುವ ಭರವಸೆಗಳು ದಂತ ಗೋಪುರವಾಗಬಾರದು. ಅಂತರ್ಜಲ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ಪ್ರದೇಶಗಳಿಗೆ ಶುದ್ಧ ನೀರಿನ ವ್ಯವಸ್ಥೆಗಾಗಿ ಮೀಸಲಿಟ್ಟಿರುವ ಹಣವನ್ನು Ôæ_`ÑÚ·æÞOÚß’ ಎಂದು ತಿಳಿಸಿದ್ದಾರೆ.
ನರೇಗಾ ಯೋಜನೆಯಲ್ಲಿ ಹೊಸ ಬದಲಾವಣೆಯ ಜೊತೆ ಗ್ರಾಮೀಣ ಪ್ರದೇಶದ ಬಡ ಜನರಿಗೆ ಇದರಿಂದ ಹೆಚ್ಚಿನ ಉಪಯೋಗ ದೊರಕಿಸಿಕೊಡುವುದಾಗಿ ಹಣಕಾಸು ಸಚಿವರು ನೀಡಿರುವ ಭರವಸೆಯನ್ನು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಾಗಿ ಜಾರಿ ತಂದಲ್ಲಿ ಮಾತ್ರ ಯೋಜನೆ ಸಾರ್ಥಕವಾಗುತ್ತದೆ. ಕೆಜಿಎಫ್‌ನಲ್ಲಿ ಚಿನ್ನದ ಗಣಿ ಪುನರಾರಂಭಕ್ಕೆ ಯಾವುದೇ ಭರವಸೆ ಸಿಕ್ಕಿಲ್ಲವೆಂದು ನಗರಸಭೆ ಮಾಜಿ ಸದಸ್ಯ ತ್ಯಾಗರಾಜ್ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.