ರಿಯಾಯಿತಿ ದರದಲ್ಲಿ ರಸಮೇವು ಮಾರಾಟ
ಬಾಗೇಪಲ್ಲಿ: ಜಾನುವಾರುಗಳಿಗೆ ರಿಯಾಯಿತಿ ದರದಲ್ಲಿ ರಸ ಮೇವನ್ನು ಆರ್ .ಕೆ.ವಿ.ವೈ ಯೋಜನೆಯಡಿಯಲ್ಲಿ ತಾಲ್ಲೂಕಿನ ಚಾಕವೇಲು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ರೈತರಿಗೆ ವಿತರಣೆ ಮಾಡಲಾಯಿತು.
ತಾಲೂಕಿನಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಮಳೆಯಿಲ್ಲದೆ ಕುಡಿವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಸಮರ್ಪಕ ಮೇವು ಸಿಗುತ್ತಿಲ್ಲ. ಇದರಿಂದ ಬಹುತೇಕ ರೈತರು ತಮ್ಮ ಜಾನುವಾರುಗಳನ್ನು ಬಲವಂತವಾಗಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಸಾಮಾನ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಸುಲಭವಾಗಿ ಮೇವನ್ನು ಒದಗಿಸುವ ನಿಟ್ಟಿನಲ್ಲಿ ಆರ್ಕೆವಿವೈ ಯೋಜನೆಯಡಿಯಲ್ಲಿ ಸುಮಾರು ರು. 40 ಸಾವಿರ ವೆಚ್ಚದಲ್ಲಿ 10 ಟನ್ ರಸಮೇವನ್ನು ಉತ್ಪಾದಿಸಿದೆ.
ಚಾಕವೇಲು ಹಾಲು ಉತ್ಪಾದಕರ ಸಹಕಾರ ಸಂಘವು ಸಂಘದ ಪದಾಧಿಕಾರಿಗಳ ಸಹಕಾರದೊಂದಿಗೆ ರೈತರಿಗೆ ಪ್ರತಿ ಕೆಜಿಗೆ ರು. 3ರಂತೆ ರಿಯಾಯಿತಿ ದರದಲ್ಲಿ ಮೇವನ್ನು ವಿತರಿಸುತ್ತಿರುವುದಾಗಿ ಚಾಕವೇಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್. ವೆಂಕಟರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಶಿವಾರೆಡ್ಡಿ, ಗ್ರಾಮದ ಮುಖಂಡರಾದ ಸುಬ್ಬಿರೆಡ್ಡಿ, ಶಂಕರರೆಡ್ಡಿ, ರವಿ, ಶ್ರೀಧರ್, ನಾರಾಯಣ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

