ಕೋಲಾರ

ಎಬಿವಿಪಿಯಿಂದ ರಾಷ್ಟ್ರೀಯ ದಿನಾಚರಣೆ

Published On :

ಕೋಲಾರ: ವಿಶ್ವದಲ್ಲೇ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿರುವ ಎಬಿವಿಪಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜೀನಿಯಸ್ ಪಿಯು ಕಾಲೇಜಿನ ಪ್ರಾಂಶುಪಾಲ ರಾಜಕುಮಾರ್ ತಿಳಿಸಿದರು.
ನಗರದ ಗೋಕುಲ್ ಕಾಲೇಜಿನ ಸಭಾಂಗಣದಲ್ಲಿ ಎಬಿವಿಪಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಎಬಿವಿಪಿ ಸ್ಥಾಪನೆ ದಿನಾಚರಣೆ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವುದಕ್ಕೆ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿದಾಗ ಸಂಘಟನೆಗೆ ಒಳ್ಳೆ  ಹೆಸರು ಬರುತ್ತದೆ ಎಂದರು.
ನಂಬರ್ ಒನ್ ಆಗಲಿ: ಅಧ್ಯಕ್ಷತೆ ವಹಿಸಿದ್ದ ಗೋಕುಲ್ ಕಾಲೇಜಿನ ಉಪ ಪ್ರಾಂಶುಪಾಲ ಮಹೇಶ್ ಮಾತನಾಡಿ, ಜ್ಞಾನ, ಶೀಲ, ಏಕತೆ ಈ ಮೂರು ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಭಾರತವನ್ನು ವಿಶ್ವದ ನಂಬರ್ ಒನ್  ರಾಷ್ಟ್ರವನ್ನಾಗಿ ಮಾಡಬೇಕು ಎಂದು ಹೇಳಿದರು.
ಎಬಿವಿಪಿಯ ಜಿಲ್ಲಾ ಸಂಚಾಲಕ ಸುನೀಲ್ ಕುಮಾರ್ ಮಾತನಾಡಿ, ಎಬಿವಿಪಿ 65 ವರ್ಷಗಳನ್ನು ಪೂರ್ಣಗೊಳಿಸಿರುವ ಬಗ್ಗೆ ಮತ್ತು ಸಂಘಟನೆಯ ಕಾರ್ಯವೈಖರಿ ಬಗ್ಗೆ ತಿಳಿಸಿದರು. ಕೋಲಾರ ಜಿಲ್ಲೆಯಲ್ಲಿ ತಾನು ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗಳು, ಹೋರಾಟಗಳ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರಳಿ ತಿಳಿಸಿಕೊಟ್ಟರು. ಗೌತಮ್, ಪ್ರಶಾಂತ್, ಹರೀಶ್, ನಾಗರಾಜ್, ರೋಜ, ಶಿಲ್ಪ, ಅಶೋಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.