ಕೋಲಾರ

ಚಿಕ್ಕಬಳ್ಳಾಪುರ ಮಂಡೂರು ಮಾಡಲು ಬಿಡುವುದಿಲ್ಲ

Published On :

ಚಿಕ್ಕಬಳ್ಳಾಪುರ: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಘನ ತ್ಯಾಜ್ಯ ಮತ್ತು ಕಸವನ್ನು ಜಿಲ್ಲೆಯಲ್ಲಿ ಸುರಿಯಬಾರದು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ನಾಗರಿಕರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಂದಿ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್  ಮುಖಂಡ ಯಲುವಹಳ್ಳಿ ಎನ್ .ರಮೇಶ್, “·æMVÚ×ÚàÁÚß ಮಹಾ ನಗರದ ತ್ಯಾಜ್ಯವನ್ನು ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಜಿಲ್ಲೆಯನ್ನು ಕಸದ ತೊಟ್ಟಿಯನ್ನಾಗಿ ರೂಪಿಸುವ ಯಾವುದೇ ಯೋಜನೆ ಇದ್ದರೂ ಅದು ಜಿಲ್ಲೆಗೆ ಗಂಡಾಂತರವಾಗಲಿದೆ. ಜಿಲ್ಲೆಯ ಜನತೆಯ ಆರೋಗ್ಯ ಮತ್ತು ನೆಮ್ಮದಿಯನ್ನು ಕದಡುವ ಯಾವುದೇ ಯೋಜನೆಯನ್ನು ಸರ್ಕಾರ ಕೈಗೊಳ್ಳಬಾರದು. ಯಾವುದೇ ಕಾರಣಕ್ಕೂ ಬೆಂಗಳೂರಿನ ಕಸವನ್ನು ಜಿಲ್ಲೆಯಲ್ಲಿ ಸುರಿಯಬಾರದು. ಚಿಕ್ಕಬಳ್ಳಾಪುರವನ್ನು ಮತ್ತೊಂದು ಮಂಡೂರು ಮಾಡಲು ಮುಂದಾದರೆ ಉಗ್ರ ಹೋರಾಟ ÔÚÉß½OÚæà×ÚÙÅÛVÚßÈÚâ¥Úß’ ಎಂದು ಎಚ್ಚರಿಸಿದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ವೆಂಕಟೇಶ್, ಕೃಷ್ಣಮೂರ್ತಿ, ಚಿಕ್ಕಗರಿಗರೆಡ್ಡಿ, ಶ್ರೀಧರ್, ನಾಗರಿಕರಾದ ಮಂಜುನಾಥ್ , ರಮೇಶ್, ಪಿ.ಶಂಕರಪ್ಪ, ಕೃಷ್ಣಪ್ಪ, ಮಹೇಶ್, ಎನ್.ಚಂದ್ರು, ಕೆ.ಸಿ.ಕರಗಪ್ಪ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.