ಕೋಲಾರ

ಡಿಸಿ ವರ್ಗಕ್ಕೆ ಆಗ್ರಹ

Published On :

ಚಿಕ್ಕಬಳ್ಳಾಪುರ: ದಲಿತರ ಸಮಸ್ಯೆಗಳನ್ನು ಬಗೆಹರಿಸಲು ವಿಫಲರಾಗಿರುವ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಡಾ.ಅಂಬೇಡ್ಕರ್ ವಸತಿ ನಿಲಯದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು ಎಂ.ಜಿ.ರಸ್ತೆ ಮತ್ತು ಬಿ.ಬಿ.ರಸ್ತೆ ಮೂಲಕ ಹೊರ ವಲಯದಲ್ಲಿರುವ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ತೆರಳಿದರು. ನಂತರ ರಾಜ್ಯ ಸರ್ರ್ಕಾರಕ್ಕೆ ತಮ್ಮ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಮಾದಿಗ ದಂಡೋರ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್  ವಾದ), ಸಮತಾ ಸೈನಿಕ ದಳ, ದಸಂಸ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಜೊತೆಗೂಢಿದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕಾವು ಜೋರಾಗಿತ್ತು. ಈ ವೇಳೆ ಮಾತನಾಡಿದ ಕದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘಟನೆಗಳ ನಡುವೆ ಬಿರುಕು ಉಂಟು ಮಾಡಿ ಹೋರಾಟಗಳನ್ನು ಹತ್ತಿಕ್ಕುವ, ಹೋರಾಟಗಾರರನ್ನು ಜೈಲಿಗೆ ಕಳುಹಿಸುವಂತಹ ಧೋರಣೆಯನ್ನು ಜಿಲ್ಲಾಧಿಕಾರಿ ಕೈಬಿಡಬೇಕು.  ಜಿಲ್ಲಾಧಿಕಾರಿ ಆರ್.ವಿಶಾಲ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಸರ್ಕಾರ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕೆ.ಸಿ.ರಾಜಾಕಾಂತ್, ವೆಂಕಟಸ್ವಾಮಿ, ಶಂಕರಪ್ಪ ಮಾತನಾಡಿದರು. ವೆಂಕಟಗಿರಿ, ಬಿ.ವಿ.ಆನಂದ್ , ವೇಣು, ಮುನಿವೆಂಕಟಸ್ವಾಮಿ, ಗಂಗಾಧರ್ , ಭಾಗ್ಯಮ್ಮ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.