ಕೋಲಾರ

ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ

Published On :

ಗೌರಿಬಿನದೂರು: ತಾಲೂಕಿನ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವ ಎಬಿವಿಪಿ ಸೇವೆ ಶ್ಲಾಘನೀಯ ಎಂದು ಭಾರತಮಾತಾ ಸೇವಾ ಟ್ರಸ್ಟ್ ಅಧ್ಯಕ್ಷ ಎನ್. ಎಮ್. ರವಿನಾರಾಯಣರೆಡ್ಡಿ ಅಭಿಪ್ರಾಯಪಟ್ಟರು. ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಅವರಣದ ಬೆಳ್ಳಿ ಭವನದಲ್ಲಿ ಎಬಿವಿಪಿ ಹಮ್ಮಿಕೊಂಡಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ದೇಶದಲ್ಲಿ ಭ್ರಷ್ಟಾಚಾರಕ್ಕೆ ಮೂಲ ಚುಣಾವಣೆ. ಭ್ರಷ್ಟಾಚಾರ ಮುಕ್ತ ಚುಣಾವಣೆ ನಡೆದು ಉತ್ತಮ ನಾಯಕ ಆಯ್ಕೆಯಾದಾಗ ದೇಶ ಮುಂದುವರಿಯಲು ಸಾಧ್ಯ ಎಂದರು. ಕರುನಾಡ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಬಾಲಾಜಿ ಮಾತನಾಡಿ, ವಿದ್ಯಾರ್ಥಿ ಜೀವನ ಸಾಧನೆಯ ಸಮಯ ಎಂದರು. ಎಬಿವಿಪಿ ಜಿಲ್ಲಾ ಮುಖಂಡ ಮಂಜುನಾಥ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ಮತ್ತು ದೇಶ ಕಟ್ಟಲು ಕಂಕಣ ಬದ್ಧರಾಗಬೇಕೆಂದು ಕರೆಯಿತ್ತರು. ಎಇಎಸ್ ಕಾಲೇಜಿನ ಡಾ.ಎಮ್.ವಿ. ಕೃಷ್ಣಮೂರ್ತಿ, ಉಪನ್ಯಾಸಕ ಜಿ.ಬಿ. ಪಾಂಡುರಂಗ ನಾಯಕ್, ಎಬಿವಿಪಿ ತಾಲೂಕು ಅಧ್ಯಕ್ಷ ಹರೀಶ್ ಕುಮಾರ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.