ರೇಷ್ಮೆ ಬೆಳೆಗಾರರ ಸಮಸ್ಯೆಗಳತ್ತ ತಾತ್ಸಾರ
ಬಂಗಾರಪೇಟೆ: ರೇಷ್ಮೆ ಇಲಾಖೆ ಅಧಿಕಾರಿಗಳು ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ರೇಷ್ಮೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಬಂಗಾರಪೇಟೆ ತಾಲೂಕು ಬೈವೋಲ್ಟಿನ್ ಬೆಳೆಯುವುದರಲ್ಲಿ ಪ್ರಥಮ ಸ್ಥಾನದಲ್ಲಿದೆ. ಬೈವೋಲ್ಟಿನ್ ಬೆಳೆಗಾರರ ಸಮಸ್ಯೆಗಳಿಗೆ ರೇಷ್ಮೆ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸರ್ಕಾದಿಂದ ದೊರೆಯುವ ಪ್ರೋತ್ಸಾಹ ಧನವನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸುತ್ತಿಲ್ಲ ಎಂದು ಆರೋಪಿಸಿದರು.
ವಿತರಣೆ ಇಲ್ಲ: ರೇಷ್ಮೆ ಬೆಳೆಗಾರರಿಗೆ ಸಮರ್ಪಕವಾಗಿ ಸೋಲಾರ್ ದೀಪಗಳನ್ನು ವಿತರಿಸುತ್ತಿಲ್ಲ, ಸೋಂಕು ನಿವಾರಕಗಳಾದ ಬ್ಲೀಚಿಂಗ್ ಪೌಡರ್, ಡೆಟಾಲ್, ಕ್ಲೋರೋಫೆಕ್ ಮತ್ತಿತರೆ ಸೌಲಭ್ಯಗಳನ್ನು ನೀಡದೆ ರೈತರನ್ನು ಪದೆ ಪದೇ ಕಚೇರಿಗೆ ಅಲೆಯುವಂತೆ ಮಾಡುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಪಡಿಸಿದರು.
ರೇಷ್ಮೆ ಬೈವೋಲ್ಟಿನ್ ಚಾಕಿ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಹುಳಗಳನ್ನು ಪರಿಶೀಲಿಸಿ ನಂತರ ವಿತರಿಸಲು ಆದೇಶ ನೀಡಬೇಕು ಎಂದು ಆಗ್ರಹಿಸಿದರು. ಪ್ರೋತ್ಸಾಹ ಧನ ಪಡೆಯಲು ರೈತರು ನೀಡಿರುವ ದಾಖಲೆಗಳನ್ನು ಸರ್ಕಾ ರಕ್ಕೆ ಸಕಾಲಕ್ಕೆ ಸಲ್ಲಿಸಿ, ಸಹಾಯ ಧನ ವಿತರಿಸಬೇಕು ಎಂದು ಆಗ್ರಹಿಸಿದರು.
ಭರವಸೆ: ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ಆನಂದ್ ಮತ್ತು ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ್ ಮನವಿ ಸ್ವೀಕರಿಸಿ, ಯಾವುದೇ ಕಾರಣಕ್ಕೂ ರೇಷ್ಮೆ ಬೆಳೆಗಾರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಸೂಚಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ಸಂಘದ ತಾಲೂಕು ಅದ್ಯಕ್ಷ ಮಂಜುನಾಥ್, ಗೌರವಾಧ್ಯಕ್ಷ ಬಿ. ವೆಂಕಟೇಶಪ್ಪ, ಕಾರ್ಯಾಧ್ಯಕ್ಷ ನಾಗರಾಜ್, ಸಂಚಾಲಕ ಉದಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಯ್ಯ ಗೌಡ, ಮುಖಂಡರಾದ ನಾಗೇಶ್ ಗೌಡ, ರಾಘವೇಂದ್ರ, ಅಮರೇಶ್, ಚಲಪತಿ, ಜಗದೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

