ಅನುದಾನ ಸಮರ್ಪಕ ಸದ್ಬಳಕೆಆಗಲಿ: ಶಾಸಕ ಕೃಷ್ಣಾರೆಡ್ಡಿ
ಚಿಂತಾಮಣಿ: ಸರ್ಕಾರಿ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟ ಕಾಮಗಾರಿ ನೆರವೇರಿಸಲು ಗುತ್ತಿಗೆದಾರನ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು. ತಾಲೂಕಿನ ಮುಂಗಾನಹಳ್ಳಿ ಹೋಬಳಿ ಬಟ್ಲಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮುಖ್ಯ ರಸ್ತೆಗಳ ಸುಧಾರಣೆ ಯೋಜನೆಯಡಿ 50:54 ಅನುದಾನವಾದ ರು. 1.75 ವೆಚ್ಚದಲ್ಲಿ ಎಸ್. ರಾಗುಟ್ಟಹಳ್ಳಿಯಿಂದ ಬಟ್ಲಹಳ್ಳಿವರೆಗೆ 3.7 ಕಿ.ಮೀ. ನೂತನ ಡಾಂಬರೀಕರಣ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರ ಮೂಲಭೂತ ಸೌಲಭ್ಯಗಳಿಗಾಗಿ ಸರ್ಕಾರ ರಸ್ತೆ ಚರಂಡಿ, ಕುಡಿಯುವ ನೀರು ವ್ಯವಸ್ಥೆಯನ್ನು ಕಲ್ಪಿಸಲು ತಾಲೂಕಿನ ವ್ಯಾಪ್ತಿಗೆ ಹೆಚ್ಚು ಅನುದಾನವನ್ನು ನೀಡಿದರೆ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯವೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಂಕು-ಡೊಂಕುಗಳಿಂದ ಕೂಡಿದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುವುದಾಗಿ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

