ಕೋಲಾರ

ಸಾವಯವ ಗೊಬ್ಬರ ಬಳಕೆಗೆ ಶಾಸಕರ ಸಲಹೆ

Published On :

ಚಿಂತಾಮಣಿ: ಮಣ್ಣಿನ ಫಲವತ್ತತೆಯನ್ನು ಕಾಪಾಡಲು ರೈತರು ಸಾವಯವ ಗೊಬ್ಬರವನ್ನು ಬಳಸಬೇಕೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕಿನ ಬೀರ್ಜೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ದೊಡ್ಡ ಪ್ರಮಾಣದ ರಾಗಿ ಪ್ರಾತ್ಯಕ್ಷಿಕೆ ಪರಿಕರಗಳ ವಿತರಣಾ ಹಾಗೂ ಭೂಚೇತನ ಯೋಜನೆ- 2, ಕೈವಾರ ಹೋಬಳಿ ಮಟ್ಟದ ರೈತರ ತರಬೇತಿ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯುವ ಗೊಬ್ಬರದಿಂದ ಮಣ್ಣಿನ ಫಲವತ್ತತೆಯನ್ನು ಸಾಧ್ಯವಾದಷ್ಟೂ ರೈತರು ಕಾಪಾಡಬೇಕೆಂದು ಕಾರ್ಯಕ್ರಮದಲ್ಲಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅರಿವು ಮೂಡಿಸಿದರು.  ನಂತರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಸ್.ಎನ್. ಚಿನ್ನಪ್ಪ ರಾಗಿ ಬೆಳೆಯನ್ನು ರೈತರು ಬೆಳೆಯಲು ಕೃಷಿ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಬೇಕೆಂದು ಸಭೆಯಲ್ಲಿ ಹೇಳಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಹೀಂ ಪಾಷ ಸಭೆಯಲ್ಲಿ ರೈತ ಬಾಂಧವರಿಗೆ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಪಡೆಯಲು ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.