ಕೋಲಾರ

ಎಡಿಸಿ ಕಾರ್ಯಕ್ಕೆ ಡಿಸಿ ಡಿ.ಕೆ. ರವಿ ಮೆಚ್ಚುಗೆ

Published On :

ಕೋಲಾರ: ಜಿಲ್ಲಾಡಳಿತ ಸುಗಮವಾಗಿ ನಡೆಯಲು ಕೇವಲ ಜಿಲ್ಲಾಧಿಕಾರಿಯೊಬ್ಬರಿಂದ ಸಾಧ್ಯವಾಗದು, ಅಪರ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಸಿಬ್ಬಂದಿಯ ಸಹಕಾರ ಅತಿಮುಖ್ಯವಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು ಅವರಿಗೆ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಯಾದ ಹಿನ್ನಲೆಯಲ್ಲಿ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ನವೀನ್ ಕುಮಾರ್ ರಾಜು ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಜಿಲ್ಲಾ ಆಡಳಿತಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಇವರು ಇನ್ನಷ್ಟು ಕ್ರಿಯಾಶೀಲತೆಯಿಂದ ಕೆಲಸ ಮಾಡಿ ಕೀರ್ತಿ ಸಂಪಾದಿಸಲಿ ಎಂದರು. ಕಂದಾಯ ಅದಾಲತ್, ಪೋಡಿ ಅದಾಲತ್‌ಗಳಲ್ಲಿ ತಮಗೆ ಎಡಿಸಿ ಹೆಚ್ಚಿನ ನೆರವು ನೀಡುತ್ತಿದ್ದರು, ಅದರಿಂದ ಯಶಸ್ಸು ಕಾಣಲು ಸಾಧ್ಯವಾಯಿತು. ವೃತ್ತಿಯ ನಡುವೆ ಮಾನಸಿಕ ಒತ್ತಡಗಳು ಇದ್ದಾಗ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು ಎಂದರು. ಬೀಳ್ಕೊಡುಗೆ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.