ಕೋಲಾರ

ವೈಶಿಷ್ಟ್ಯಪೂರ್ಣ ಭಾರತೀಯ ಸಂಸ್ಕೃತಿ: ಪೂರ್ಣಾನಂದ ಸ್ವಾಮಿ

Published On :

ಶಿಡ್ಲಘಟ್ಟ: ಸನಾತನ ಭಾರತೀಯ ಸಂಸ್ಕೃತಿ ವಿಶ್ವದಲ್ಲೇ ವೈಶಿಷ್ಟ್ಯಪೂರ್ಣವಾಗಿದೆ ಎಂದು ಶ್ರೀ ರಾಮಕೃಷ್ಣ ವಿವೇಕಾನಂದ ಮಠದ ಪೂರ್ಣಾನಂದ ಸ್ವಾಮಿ ತಿಳಿಸಿದರು. ಮಳ್ಳೂರು ಸಮೀಪದ ಸಾಯಿಜ್ಞಾನ ಮಂದಿರದದಲ್ಲಿ ಗುರುಪೌರ್ಣಿಮೆ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಯಾಂತ್ರಿಕ ಯುಗದ ಇಂದಿನ ಜಗತ್ತಿನಲ್ಲಿ ಮನಸ್ಸಿನ ಏಕಾಗ್ರತೆಗೆ ಆದ್ಯಾತ್ಮಿಕ ಚಿಂತನೆಯಿಂದ ಮಾತ್ರ ಸಾಧ್ಯ. ಸಾಧಕನಿಗೆ ಜಾತಿ ಬೇದವಿಲ್ಲ. ಸತತ ಪರಿಶ್ರಮದಿಂದ ಪ್ರಗತಿ ಸಾಧಿಸಲು ಸಾಧ್ಯವೆಂದರು.
ದೇವಾಲಯದ ಮುಖ್ಯ ಸಂಚಾಲಕ ನಾರಾಯಣಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 9 ವರ್ಷಗಳಿಂದ ಸಾಯಿನಾಥ ಜ್ಞಾನ ಮಂದಿರದಲ್ಲಿ ದಾರ್ಮಿಕ ಕಾರ್ಯಕ್ರಮಗಳೊಂದಿಗೆ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಆರ್ಥಿಕವಾಗಿ ಸಹಾಯ ಡುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.