ಜಿಲ್ಲಾಧಿಕಾರಿ ವಿಶಾಲ್ ಡೇ ಔಟ್
ಶಿಡ್ಲಘಟ್ಟ: ಜಿಲ್ಲಾಧಿಕಾರಿ ಡಾ.ವಿಶಾಲ್ ಅವರು ಗುರುವಾರ ತಾಲೂಕಿಗೆ ದಿಢೀರ್ ಭೇಟಿ ನೀಡಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಮೊದಲಿಗೆ ತಾಲೂಕು ಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದುಕೊಂಡಿರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ನಾರಾಯಣಸ್ವಾಮಿ ಅವರಿಗೆ ತಿಳಿಸಿದರು. ವಿದ್ಯಾರ್ಥಿನಿಲಯಗಳು ಸೇರಿದಂತೆ ವಿವಿಧ ಉದ್ದೇಶಗಳಿಗೆ ಮಂಜೂರು ಮಾಡಿರುವ ಜಮೀನುಗಳ ಕಡತಗಳನ್ನು ಪರಿಶೀಲಿಸಿದ ಅವರು, ಆಶ್ರಯ ಯೋಜನೆಯಡಿ ವಸತಿರಹಿತರು ಮತ್ತು ನಿವೇಶನರಹಿತ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಿದರು.
ನಂತರ ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ನಿರ್ಮಿತಿ ಕೇಂದ್ರದ ಮೂಲಕ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರೊಂದಿಗೆ ಬೆರೆತು ಅನೇಕ ವಿಚಾರಗಳ ವಿನಮಯ ಮಾಡಿಕೊಂಡರು. ನಂತರ ಅವರು, ತಾಲೂಕಿನ ಹನುಮಂತಪುರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಕಾಮಗಾರಿ ವೀಕ್ಷಿಸಿ, 2 ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಸಮೀಪ ಐಡಿಎಸ್ ಎಂ.ಟಿ. ಯೋಜನೆಯಡಿ 49 ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಣಿಜ್ಯ ಮಳಿಗೆಗಳ ಕಾಮಗಾರಿಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿ, 28 ಮಳಿಗೆಯಲ್ಲಿ ಒಂದು ಮಳಿಗೆಯನ್ನು ಶೌಚಾಲಯ ಮೀಸಲಿಡಬೇಕು ಎಂದು ಸೂಚಿಸಿದರು.
ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ಸಮೀಪವಿರುವ ಮಿನಿ ಬಸ್ ನಿಲ್ದಾಣದಲ್ಲಿ ಅಗ್ನಿಶಾಮಕ ದಳದ ಕ:ಕೇರಿಯನ್ನು ಸ್ಥಾಪಿಸಲು ಬಂದಿರುವ ಮನವಿಯನ್ನು ಪ್ರಸ್ತಾಪಿಸಿದ ಜಿಲ್ಲಾಧಿಕಾರಿಗಳ ಈ ಕುರಿತು ವರದಿ ಮಂಡಿಸಬೇಕೆಂದು ತಹಸೀಲ್ದಾರ್ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗೆ ತಹಸೀಲ್ದಾರ್ ನಾರಾಯಣಸ್ವಾಮಿ, ರಾಜಸ್ವ ನಿರೀಕ್ಷಕ ಸುಬ್ರಮಣಿ, ಗ್ರಾಮಲೆಕ್ಕಾಧಿಕಾರಿ ಲಾರೆನ್ಸ್,ಪುರಸಭೆಯ ಕಿರಿಯ ಅಭಿಯಂತರ ಪ್ರಸಾದ್, ಪವಿತ್ರ ಮತ್ತಿತರರು ಪರಿಶೀಲನಾ ಸಮಯದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

