ಜಿಲ್ಲಾಧಿಕಾರಿ ರವಿ ಸರ್ವಾಧಿಕಾರಿ: ಶಾಸಕ ನಾರಾಯಣಸ್ವಾಮಿ
ಬಂಗಾರಪೇಟೆ: ಪಟ್ಟಣದ ಶಾದಿಮಹಲ್ನಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ನಡೆದ ಅಟ್ರಾಸಿಟಿ ಸಭೆಗೆ ಸೌಜನ್ಯಕ್ಕಾದರೂ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರು ನನ್ನ ಗಮನಕ್ಕೆ ತರದೆ ನಡೆಸಿದ್ದಾರೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯವನ್ನು ನಿಯಂತ್ರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ದೌರ್ಜನ್ಯ ತಡೆ ಸಭೆಯನ್ನು ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಬೇಕು. ಆದರೆ ಗುರುವಾರ ಜಿಲ್ಲಾಧಿಕಾರಿಗಳು ಯಾರ ಗಮನಕ್ಕೂ ತರದೆ ಏಕಾಏಕಿಯಾಗಿ ಸಭೆಯನ್ನು ನಿಗದಿಪಡಿಸಿದ್ದಾರೆ. ಸ್ಥಳೀಯ ಶಾಸಕನಾದ ನನ್ನ ಗಮನಕ್ಕೂ ತಂದಿಲ್ಲ. ನಾನು ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಬೇಕಿತ್ತು. ಸಭೆಗೆ ಉದ್ದೇಶ ಪೂರ್ವಕವಾಗಿ ಗೈರು ಹಾಜರಾಗಿರುವಂತೆ ದಲಿತರಲ್ಲಿ ತಾಲೂಕು ಆಡಳಿತ ಸಂದೇಶ ಮೂಡಿಸಿದೆ. ಮೀಸಲು ಕ್ಷೇತ್ರದಿಂದ ಶಾಸಕನಾಗಿರುವ ನನಗೆ ಅಟ್ರಾಸಿಟಿ ಸಭೆ ನಡೆಸುವ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕಾದ ತಾಲೂಕು ಆಡಳಿತ ಅಥವಾ ಜಿಲ್ಲಾಡಳಿತ ಅಪಮಾನ ಮಾಡಿದ್ದಾರೆ ಎಂದು ಅಧಿಕಾರಿಗಳ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲಾಧಿಕಾರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಎಲ್ಲಾ ನಿರ್ಧಾರವನ್ನು ಏಕಪಕ್ಷಿಯವಾಗಿ ತೆಗೆದುಕೊಳ್ಳುತ್ತಿದ್ದು ಜನಪ್ರತಿನಿಧಿಗಳನ್ನು ಪರಿಗಣಿಸುತ್ತಿಲ್ಲ. ಕ್ಷೇತ್ರದಲ್ಲಿ ನಡೆದ ಕಂದಾಯ ಅದಾಲತ್, ಪೆನ್ಷನ್ ಅದಾಲತ್ ಸಭೆಗಳಿಗೆ ನನ್ನನ್ನು ಆಹ್ವಾನಿಸಿಲ್ಲ. ಜು.22ರಂದು ಪೋಡಿ ಅದಾಲತ್ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಇದುವರೆಗೂ ಮಾಹಿತಿ ನೀಡಿಲ್ಲ. ಇದೇನು ಪ್ರಜಾಪ್ರಭುತ್ವವೋ ಇಲ್ಲ ಹಿಟ್ಲರ್ ಆಡಳಿತವೋ ತಿಳಿಯುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳ ವಿರುದ್ಧ ಹರಿಹಾಯ್ದರು.
ಈ ಹಿಂದೆ ತಹಸೀಲ್ದಾರ್ ಆಗಿದ್ದ ಉಷಾ ಅವರು ವರ್ಗಾವಣೆಗೊಂಡ ಬಳಿಕ ತಮ್ಮ ಜೊತೆ ಚರ್ಚಿಸದೆ ಮುಜರಾಯಿ ಇಲಾಖೆಯಲ್ಲಿದ್ದ ಸೋಮಶೇಖರ ಅವರನ್ನು ತಹಸೀಲ್ದಾರ್ ಆಗಿ ನಿಯೋಜನೆ ಮಾಡಿರುವ ಜಿಲ್ಲಾಧಿಕಾರಿಗಳ ಕಾರ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿ ಇವರ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

