ಒತ್ತಡಕ್ಕೆ ಮಣಿದು ಮನವಿ ಸ್ವೀಕರಿಸಿದ ಸಚಿವೆ
ಕೋಲಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಎಬಿವಿಪಿ ಮುಖಂಡರ ಒತ್ತಡಕ್ಕೆ ಮಣಿದು ಮನವಿ ಸ್ವೀಕರಿಸಿದ ಪ್ರಸಂಗ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಪ್ರಾಂಗಣದಲ್ಲಿ ನಡೆಯಿತು.
ರಾಜ್ಯಾದ್ಯಂತ ನಡೆದಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಬೆಂಗಳೂರಿನ ಪುಲಕೇಶಿ ನಗರದಲ್ಲಿ 22 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ನಾಸೀರ್ ಹೈದರ್‌ನನ್ನು ಗಲ್ಲಿಗೇರಿಸಬೇಕೆಂದು ಹಾಗೂ ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಲು ಒತ್ತಾಯಿಸಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆಗೆ ಜಿಲ್ಲೆಯ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಅವರನ್ನು ಭೇಟಿಯಾದ ಎಬಿವಿಪಿ ಮುಖಂಡ ಮುರಳಿ, ಅತ್ಯಾಚಾರಗಳ ವಿರುದ್ಧ ಹೆಣ್ಣು ಮಕ್ಕಳು ಸುಮಾರು ಎರಡು ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯರ ಅಹವಾಲು ಸ್ವೀಕರಿಸಿ ಎಂದು ಮನವಿ ಮಾಡಿದರು.
ಅಧಿಕಾರಿಗಳ ಬಳಿ ಮಾಹಿತಿ ಪಡೆದು ನಂತರ ಮನವಿ ಸ್ವೀಕರಿಸುತ್ತೇನೆಂದು ಸಚಿವೆ ಭರವಸೆ ನೀಡಿದರಾದರೂ ವಿದ್ಯಾರ್ಥಿಗಳು ಈಗಲೇ ಮನವಿ ಸ್ವೀಕರಿಸಬೇಕು, ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆಯ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು. ಸಭೆಯನ್ನು ಮೊಟಕು ಮಾಡಿ ಎಬಿವಿಪಿ ಒತ್ತಡಕ್ಕೆ ಮಣಿದ ಸಚಿವರು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನೊಂದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಲಾಗುತ್ತದೆ ಎಂದು ಹೇಳಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

