ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ
ಚಿಂತಾಮಣಿ: ರಾಜ್ಯದ ವಿವಿಧ ಕಡೆಗಳಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ ಎಂದು ಖಂಡಿಸಿ ಎಬಿವಿಪಿ ಸಂಘಟನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನೆಡಿಸಿದರು.
ನಗರದ ಪ್ರವಾಸಿ ಮಂದಿರ ದಿಂದ ಎಬಿವಿಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ ರೆಡ್ಡಿ, ಬೆಂಗಳೂರಿನ ಬೆಂಗಳೂರಿನಲ್ಲಿ ಗೃಹ ಸಚಿವರ ಮನೆ ಎದುರು ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೋಲಿಸರು ಹಲ್ಲೆ ಮಾಡಿರುವುದನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ರಾಜ್ಯದ ಗೃಹ ಮಂತ್ರಿಗಳಿಗೆ ಸಾಮಾಜಿಕ ಕಳಕಳಿ ಇದ್ದಿದ್ದರೆ ಅನ್ಯಾಯವನ್ನು ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಶ್ಲಾಘಿಸಿ, ಅವರೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಸಾರ್ವಜನಿಕರ ರಕ್ಷಣೆಯ ಭರವಸೆ ನೀಡಬೇಕಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ ಅಮಾಯಕ ವಿದ್ಯಾರ್ಥಿಗಳ ಮೇಲೆ ಪೊಲೀಸರ ಮೂಲಕ ದಬ್ಬಾಳಿಕೆ ನಡೆಸಿದ್ದು ಖಂಡನೀಯ ಎಂದರು.
ಅತ್ಯಾಚಾರದ ಪ್ರಕರಣಗಳ ಕುರಿತು ಕೇವಲ ಚರ್ಚೆಯಾಗದೇ, ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವ ಸಾಮಾಜಿಕ ಬದ್ಧತೆಯನ್ನು ಸರ್ಕಾರ ತೋರಿಸಬೇಕು. ಇಂತಹ ಹೀನ ಕೃತ್ಯಗಳನ್ನು ಎಸಗುವ ವ್ಯಕ್ತಿಗಳು ಮತ್ತು ಅವರ ರಕ್ಷಣೆಗೆ ನಿಲ್ಲುವ ಪೋಲಿಸ್ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನಾಕಾರರು ಮುಖ್ಯಮಂತ್ರಿ, ಗೃಹಮಂತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆಯ ಮುಖವಾಡಗಳನ್ನು ಧರಿಸಿ ಪ್ರತಿಭಟನೆ ನಡೆಸಿದರು. ನಂತರ ತಾಲೂಕು ಕಚೇರಿಯ ಮುಂದೆ ಅತ್ಯಾಚಾರಿಗಳ ಪ್ರತಿಕೃತಿ ಸುಟ್ಟು ಪ್ರತಿಭಟನೆ ನಡೆಸಿದರು. ನಂತರ ಶಿರಸ್ತೀದಾರರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲ್ಲಿ ಸುರೇಶ್, ನರೇಶ್, ವಿಜಯ್, ವರ್ಷಿಣಿ, ರೂಪ, ಕಾವ್ಯ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

