ಕೋಲಾರ

ಮಹಿಳಾ ದೌರ್ಜನ್ಯ ತಡೆಗೆ ಒಗ್ಗೂಡಿ: ರಾಮಕ್ಕ

Published On :

ಕೋಲಾರ: ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಪ್ರತಿಯೊಬ್ಬರು ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದು ಕೆಜಿಎಫ್ ಶಾಸಕಿ ವೈ.ರಾಮಕ್ಕ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಸಮಾಜ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿ, ಇತ್ತೀಚೆಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೋಷಕರು ಹೆಣ್ಣು ಮಕ್ಕಳ ಬಗ್ಗೆ ಜಾಗೃತೆಯಿಂದರಬೇಕು. ಠಾಣೆಯಲ್ಲಿ ದೂರು ನೀಡಲು ಹೋದರೆ ಬಡವರ ಮಕ್ಕಳು ಎಂದು ಕೇಸು ತೆಗೆದುಕೊಳ್ಳುವುದಿಲ್ಲ. ದೊಡ್ಡವರಿಗೆ ಮಾನ್ಯತೆ ನೀಡುತ್ತಾರೆಂದು ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಮಾಜಿ ಶಾಸಕ ವೈ.ಸಂಪಂಗಿ, ಆನೆಕಲ್ ಶಾಸಕ ಬಿ.ಶಿವಣ್ಣ ಮಾತನಾಡಿದರು. ಸಮಾಜ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಾದ ಡಾ.ಸಿ.ಮೋಹನ್, ಎಂ.ನಾರಾಯಣಪ್ಪ, ಎಂ.ಪಾಪಣ್ಣ, ಪಾಪಣ್ಣ, ಕೆ.ಎಸ್.ಗಣೇಶ್ ಮತ್ತು ಟಿ.ಮುನಿವೆಂಕಟಸ್ವಾಮಿ ಅವರನ್ನು ಪುರಸ್ಕರಿಸಲಾಯಿತು. ಎಸ್.ಕೆ.ಕಾವ್ಯ ಸೇರಿದಂತೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯೋಗಕಾರಿಯಾಗಿರುವ ಯುವ ಸ್ಫೂರ್ತಿ ಪುಸ್ತಕವನ್ನು ಪಿ.ನಾರಾಯಣಸ್ವಾಮಿ ಬರೆದಿದ್ದು, ಗಣ್ಯರು ಬಿಡುಗಡೆ ಮಾಡಿದರು. ಸಂಘದ ಅಧ್ಯಕ್ಷ ಡಾ.ಪಿ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಆಯುಕ್ತ ಕೆ.ಎನ್.ಜಗದೀಶ್, ಪಿಯು ಉಪ ನಿರ್ದೇಶಕ ದೊರೆಸ್ವಾಮಿ, ಬಂಗಾರಪೇಟೆ ಎಂ.ನಾರಾಯಣ್,ಪ್ರಸನ್ನ ಕುಮಾರ್, ಕೆ.ಜಯದೇವ್, ಚಿನ್ನಾಪುರ ನಾರಾಯಣಸ್ವಾಮಿ, ಕೆ.ಆರ್.ಧನರಾಜ್, ಡಾ.ನಾರಾಯಣಸ್ವಾಮಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.