ಅತ್ಯಾಚಾರ, ದೌರ್ಜನ್ಯ ತಡೆಗೆ ಕಾರ್ಯಾಗಾರ
ಕೆಜಿಎಫ್: ಕೋಲಾರ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತೆಡೆಗಟ್ಟಲು ಮತ್ತು ಇಂಥ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕೆಂಬ ನಿಟ್ಟಿನಲ್ಲಿ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ವತಿಯಿಂದ ಆಂಡ್ರಸನ್ಪೇಟೆ ವೃತ್ತದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್ಪಿ ಎ.ಕೆ.ವಿವೇಕಾನಂದ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯದಂತೆ ತಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆ ಜತೆ ಸಹಕರಿಸಬೇಕು ಎಂದು ಹೇಳಿದರು. ತಮ್ಮ ಮಕ್ಕಳನ್ನು ಶಾಲೆ ಪೋಷಕರೇ ಕರೆದುಕೊಂಡು ಹೋಗಿ ಬರಬೇಕು. ಆಟೋಗಳಲ್ಲಿ ಕಳುಹಿಸುವ ಮಕ್ಕಳ ಬಗ್ಗೆ ಪೋಷಕರು ಸದಾ ಎಚ್ಚರವಹಿಸಬೇಕು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ಸಾರ್ವಜನಿಕರ ತಮ್ಮ ಬಡಾವಣೆಗಳಲ್ಲಿ ಅನುಮಾನವಾಗಿ ತಿರುಗಾಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ನಿಗಾವಹಿಸಬೇಕು. ಶಾಲೆಗಳಿಗೆ ಮಕ್ಕಳನ್ನು ಒಂಟಿಯಾಗಿ ಕಳುಹಿಸಬೇಡಿ. ತಮ್ಮ ಮಕ್ಕಳು ಇತರೆ ವ್ಯಕ್ತಿಗಳೊಂದಿಗೆ ಸಲುಗೆಯಿಂದ ಇರುವ ಬಗ್ಗೆ ಆಗಾಗ ಎಚ್ಚರ ವಹಿಸಿ. ಕಾಲೇಜಿಗೆ ಹೋಗಿಬರುವ ತಮ್ಮ ಮಕ್ಕಳೊಂದಿಗೆ ಪ್ರೀತಿ ಪ್ರೇಮ ಎಂದು ತಿರುಗಾಡುವ ವ್ಯಕ್ತಿಗಳ ಬಗ್ಗೆ ವಿವರಣೆ ಪಡೆಯಲು ಮತ್ತು ಅದನ್ನು ತಡೆಗಟ್ಟಲು ಪೋಷಕರು ಮುಂದಾಗಬೇಕು. ಮಕ್ಕಳಿಗೆ ಮೊಬೈಲ್ ಕೊಡಿಸುವುದಾಗಿಲಿ ಅಥವಾ ಅದನ್ನು ಶಾಲಾ ಕಾಲೇಜುಗಳಿಗೆ ತೆಗೆದುಕೊಂಡು ಹೋಗದಂತೆ ಕ್ರಮ ಕೈಗೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಬೇಕು ಎಂದರು. ವೃತ್ತ ನಿರೀಕ್ಷಕ ಎಂ.ಡಿ.ಲಕ್ಷ್ಮೀನಾರಾಯಣ, ಆಂಡ್ರಸನ್ಪೇಟೆ ಠಾಣೆ ಪಿಎಸ್ಐ ಎಲ್.ರಂಗಶಾಮಯ್ಯ ಸೇರಿದಂತೆ ಆಟೋ ಚಾಲಕರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

