ವರ್ಗಾವಣೆ ಲೋಪ ಸರಿಪಡಿಸಲು ಆಗ್ರಹ
ಚಿಂತಾಮಣಿ: ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನಡೆವ ವರ್ಗಾವಣೆಯಲ್ಲಿನ ಲೋಪದೋಷಗಳನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳು ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
2014-15ನೇ ಸಾಲಿನ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡುತ್ತಿರುವುದು ಸರಿಯಷ್ಟೆ. ಆದರೆ ಈ ವರ್ಗಾವಣೆಗಾಗಿ ಸ್ಥಳಗಳನ್ನು ಮೂರು ವಲಯಗಳಾಗಿ ವಿಂಗಡಿಸಿದ್ದಾರೆ. ಇದರಲ್ಲಿ ಮೇಲ್ನೋಟಕ್ಕೆ ಹಲವು ನ್ಯೂನ್ಯತೆಗಳು ಕಂಡುಬಂದಿವೆ. ಮಹಾನಗರ ಪಾಲಿಕೆಗಳಾದ ಬೆಂಗಳೂರು, ಮೈಸೂರು ಇತ್ಯಾದಿಗಳನ್ನು ನಗರಸಭೆಗಳಿಗೆ ಸಮನಾಗಿ ಎ ವಲಯವೆಂದು ವಿಂಗಡಿಸಿದ್ದಾರೆ. ಇದರಿಂದ ಸುಮಾರು ವರ್ಷಗಳಿಂದ ನಗರಸಭೆಗಳ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಆಗುತ್ತಿರುವ ಅನ್ಯಾಯ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಮಹಾನಗರ ಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಶೇ. 30ರಷ್ಟು ಮನೆ ಬಾಡಿಗೆ ಭತ್ಯೆವನ್ನು ಪಡೆಯುತ್ತಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಿಬ್ಬಂದಿ ಶೇ.10ರಷ್ಟು ಮನೆ ಬಾಡಿಗೆ ಭತ್ಯೆವನ್ನು ಪಡೆಯುತ್ತಿದ್ದಾರೆ. ಈ ವಲಯಗಳನ್ನು ಜನಸಾಂದ್ರತೆ ಮತ್ತು ಬಾಡಿಗೆ ಮನೆ ಭತ್ಯೆ ಮೇಲೆ ವಲಯವಾರುಗಳಾಗಿ ವಿಂಗಡಿಸುವಲ್ಲಿ ಎಲ್ಲಾ ಸಿಬ್ಬಂದಿಗೆ ಅನುಕೂಲವಾಗುತ್ತದೆ.
ಅವೈಜ್ಞಾನಿಕವಾಗಿ ವಿಂಗಡಿಸಿರುವುದನ್ನು ಸಂಬಂಧಪಟ್ಟ ಇಲಾಖೆಯವರು ಸರಿಪಡಿಸಲು ಸಿಬ್ಬಂದಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

