ಹುತಾತ್ಮರ ಸ್ಮಾರಕಕ್ಕೆ ನಿಧಿ ಸಂಗ್ರಹ
ಚಿಕ್ಕಬಳ್ಳಾಪುರ: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೊರಟ ಗ್ರಾಮದಲ್ಲಿ ಗೊರಟ ಹುತಾತ್ಮರ ಸ್ಮಾರಕ ನಿರ್ಮಾಣ ಮಾಡುತ್ತಿರುವುದಕ್ಕೆ ನಿಧಿ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಿಟ್ಟಹಳ್ಳಿ ಮಂಜುನಾಥರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಧಿ ಸಂಗ್ರಹ ಕಾರ್ಯಕ್ಕೆ ಜು.26ರಂದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಮೋರ್ಚಾ ರಾಜ್ಯಾಧ್ಯಕ್ಷ ಪಿ.ಮುನಿರಾಜು ಚಾಲನೆ ನೀಡಲ್ಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಎನ್ .ಎಂ.ರವಿನಾರಾಯಣರೆಡ್ಡಿ, ಮೋರ್ಚಾ ರಾಜ್ಯ ಉಪಾಧ್ಯಕ್ಷ ತಮ್ಮೇಶ್ ಗೌಡ, ಕಾರ್ಯದರ್ಶಿ ಓಂ ಶಕ್ತಿ ಚಲಪತಿ, ನಿಧಿ ಸಂಗ್ರಹ ಅಭಿಯಾನದ ಜಿಲ್ಲಾ ಸಂಚಾಲಕ ಭರತ್ರೆಡ್ಡಿ, ಸಹ ಸಂಚಾಲಕ ನರೇಶ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ದೇಶ ಭಕ್ತ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿರುವ ಯುವ ಮೋರ್ಚಾ ಜಿಲ್ಲೆಯಾದ್ಯಂತ 1200 ಮತಗಟ್ಟೆಗಳ ತಲಾ ಒಂದಕ್ಕೆ 5 ಮಂದಿ ಯುವಕರನ್ನು ಗುರುತಿಸಿ, ಪ್ರತಿ ಯುವಕರಿಂದ 10 ಸಂಗ್ರಹಿಸುವ ಮೂಲಕ ಸುಮಾರು 60 ಸಾವಿರ ನಿಧಿ ಸಂಗ್ರಹಿಸುವ ಯೋಜನೆ ರೂಪಿಸಿದೆ ಎಂದರು.
2014ರ ಸೆ.17ರಂದು ಗೊರಟ ಗ್ರಾಮದಲ್ಲಿ ಹುತಾತ್ಮ ದೇಶ ಭಕ್ತರ ಸ್ಮಾರಕ ಹಾಗೂ ಸರ್ದಾರ್ ವಲ್ಲಬಾಯ್ ಪಟೇಲ್ರ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು. 2015 ರ ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ , ಕಾರ್ಯದರ್ಶಿ ಕಿರಣ್, ಮೋರ್ಚಾ ನಗರ ಅಧ್ಯಕ್ಷ ಭರತ್, ಕಾರ್ಯದರ್ಶಿ ಜಿ.ಕೆ.ಗಜೇಂದ್ರ ರೆಡ್ಡಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

