ಜನಪ್ರತಿನಿಧಿಗಳಿಗೆ ಕಾನೂನು ಅರಿವು ಅಗತ್ಯ
ಮಾಲೂರು: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜನತೆ ಸೇವೆ ಮಾಡುವ ಮೊದಲು ಕಾನೂನಿ ಬಗ್ಗೆ ಅರಿವು ಹೊಂದಿರಬೇಕು ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಧೀಶ ರಾಜಣ್ಣ ಸಂಕಣ್ಣನವರ್ ಹೇಳಿದರು.
ಇಲ್ಲಿನ ಪುರಸಭೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಕಾರದಿಂದ ಗುರುವಾರ ಹಮ್ಮಿಕೊಂಡಿದ್ದ ಪುರಸಭೆ ಕಾಯ್ದೆ ಹಾಗೂ ಜನನ-ಮರಣ ಕಾಯ್ದೆ ಬಗ್ಗೆ ಕಾನೂನು ಅರಿವು-ನೆರವು ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಪಿ. ಶಿವರಾಜ್, ವಕೀಲ ಸಂಘ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ಮಾತನಾಡಿದರು.ಹಿರಿಯ ವಕೀಲ ಕೆ.ಮಂಜುನಾಥ್ ಪುರಸಭೆ ಕಾಯ್ದೆ ಹಾಗೂ ಜನನ ಮರಣ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ದಿನನಿತ್ಯದ ಸಾರ್ವಜನಿಕ ಸೇವೆಯಲ್ಲಿ ಕಂಡು ಬರುವ ಕಾನೂನಾತ್ಮಕ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರಲ್ಲಿ ಪ್ರಶ್ನಿಸಿ ಉತ್ತರ ಕಂಡುಕೊಂಡರು. ಪುರಸಭೆ ಅಧ್ಯಕ್ಷೆ ಭಾರತಮ್ಮ ನಂಜುಂಡಪ್ಪ, ವಕೀಲ ಸಂಘದ ಉಪಾಧ್ಯಕ್ಷ ಅಮರನಾರಾಯಣ, ಕಾನೂನು ಸಲಹಾ ಕೇಂದ್ರದ ಮುನಿರಾಜು, ಪುರಸಭೆ ಉಪಾಧ್ಯಕ್ಷೆ ಶ್ರೀವಲ್ಲಿ, ಪ್ಲಾಸ್ಟಿಕ್ ನಿರ್ಮೂಲನ ಸಮಿತಿ ಅಧ್ಯಕ್ಷ ಮುನಿಸ್ವಾಮಿ, ಪುರಸಭೆ ಸದಸ್ಯರು, ಅಧಿಕಾರಿಗಳು, ನ್ಯಾಯಾಲಯ ಗುಮಾಸ್ತ ಮಂಜುನಾಥ್ ಇದ್ದರು. ಜ್ಯೋತಿ ಪ್ರಾರ್ಥಿಸಿದರು.ಮುಖ್ಯಾಧಿಕಾರಿ ರೇಣುಕಾ ಸ್ವಾಗತಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಮಾಂಜಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

