ಅತ್ಯಾಚಾರ ತಡೆಗೆ ಎಲ್ಲರ ಸಹಕಾರ ಅಗತ್ಯ
ಟೇಕಲ್: ಹೆಣ್ಣು ಮಕ್ಕಳು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಾಸ್ತಿ ಪೋಲಿಸ್ ಠಾಣಾ ಪಿಎಸ್ಐ ಹೆಚ್.ಆರ್. ಸಿದ್ದಪ್ಪ ಹೇಳಿದರು.
ಅವರು ಮಾಸ್ತಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಹೆಣ್ಣು ಮಕ್ಕಳು ಶಾಲೆಗೆ ಅಥವಾ ಬೇರೆ ಎಲ್ಲಾದರೂ ತೆರಳಬೇಕಾದರೆ ಒಂಟಿಯಾಗಿ ತೆರಳದೆ ತಮ್ಮ ಸಹಪಾಠಿಗಳೊಂದಿಗೆ ತೆರಳಬೇಕು ಎಂದರು. ಶಾಲಾ, ಕಾಲೇಜು, ಕಾಂಪೌಂಡ್ಗಳಲ್ಲಿ ಅಪರಿಚಿತರು ಕಂಡುಬಂದಲ್ಲಿ ಪ್ರಾಧ್ಯಾಪಕರಿಗೆ ಅಥವಾ ಸ್ಥಳೀಯ ಪೋಲಿಸರಿಗೆ ಮಾಹಿತಿ ನೀಡಬೇಕು. ಹುಡುಗರು ಹುಡುಗಿಯರನ್ನು ಚುಡಾಯಿಸುವುದು ಕಂಡಲ್ಲಿ ಸಹ ಮಾಹಿತಿ ನೀಡಬೇಕು. ಇಂತಹ ಸ್ಥಳಗಳಲ್ಲಿ ಹುಡುಗರ ಚಲನವಲನಗಳನ್ನು ಗಮನಿಸಿ ಎಚ್ಚರಿಕೆಯಿಂದ ಇರಬೇಕು. ಅತ್ಯಾಚಾರ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಸ್ತಿ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ, ಉಪಪ್ರಾಂಶುಪಾಲ ತ್ರಿಶಂಕರ್, ಸಿ.ಎಂ.ತಿಮ್ಮರಾಯಪ್ಪ, ಪೊಲೀಸ್ ಪೇದೆಗಳಾದ ಶಿವಶಂಕರ್, ವೆಂಕಟೇಶ್, ಯಶವಂತ ರಾವ್, ಅನಂತ್, ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿವೃಂದದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೆಸರಗೆರೆ, ಹಸಾಂಡಹಳ್ಳಿ, ದಿನ್ನಹಳ್ಳಿ, ರಾಜೇನಹಳ್ಳಿ, ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗೌತಮ ಪ್ರೌಢಶಾಲೆಯಲ್ಲಿಯೂ ಸಹ ಅತ್ಯಾಚಾರ ತಡೆಗಟ್ಟುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

