ಮಾಲೂರಿನಲ್ಲಿ ಕರವೇ ರಸ್ತೆತಡೆ
ಮಾಲೂರು: ಬೆಳಗಾವಿ ಜಿಲ್ಲೆಯ ಯಳ್ಳೂರಿನಲ್ಲಿ ಮರಾಠಿ ನಾಮ ಫಲಕ ತೆರವು ವಿಷಯದಲ್ಲಿ ರಾಜ್ಯ ಸರ್ಕಾರಿ ಬಸ್ ಮೇಲೆ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸಿ, ಇಲ್ಲಿನ ಕರವೇ ಕಾರ್ಯಕರ್ತರು ಭಾನುವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಪಟ್ಟಣದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ರಾಮಕೃಷ್ಣಪ್ಪ, ಹೈಕೋರ್ಟ್ ಆದೇಶದ ಮೇರೆಗೆ ಯಳ್ಳೂರು ನಾಮಫಲಕವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಇದನ್ನು ಪ್ರತಿಭಟಿಸಿ ಕೊಲ್ಲಾಪುರದಲ್ಲಿ ಶಿವ ಸೇನೆ ಕಾರ್ಯಕರ್ತರು ನಮ್ಮ ರಾಜ್ಯದ ಸರ್ಕಾರಿ ಬಸ್ ಗಳಿಗೆ ಕಲ್ಲು ತೂರಾಡಿರುವುದು ಖಂಡನಿಯ. ಇವರ ವರ್ತನೆಯನ್ನು ಬೆಂಬಲಿಸಿರುವ ಸಂಭಾಜಿ ಪಾಟೀಲ್ರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಬಡಗಿ ಶ್ರೀನಿವಾಸ್, ದಯಾನಂದ್, ಹುಲಿಧೇನು ಮಂಜು,ಚಂಬೆ ರಾಜೇಶ್,ರಾಮಾಂಜಿ,ಮಧು,ಮಂಜು ಪ್ರಸಾದ್,ನೂಸಗೆರೆ ಮಂಜ,ಮುನಿರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

