ಎಂಇಎಸ್ ಪುಂಡಾಟಿಕೆಗೆ ಕನ್ನಡಿಗರ ಆಕ್ರೋಶ
ಕೋಲಾರ: ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಮಹಾರಾಷ್ಟ್ರದ ನಾಮಫಲಕಗಳನ್ನು ಹಾಕಿ ಪುಂಡಾಟಿಕೆ ನಡೆಸಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಕರ್ನಾಟಕ ಪೊಲೀಸರನ್ನು ಉಗ್ರರಿಗೆ ಹೋಲಿಕೆ ಮಾಡಿರುವ ಶಿವಸೇನೆಯ ನಾಯಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೋಲಾರದಲ್ಲಿ ಸೋಮವಾರ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿತು.
ಎಂಇಎಸ್ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಪದೇ ಪದೇ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ದಾಂಧಲೆ ನಡೆಸುತ್ತಿದ್ದಾರೆ. ಕರ್ನಾಟಕ ಅವಿಭಾಜ್ಯ ಅಂಗವಾಗಿರುವ ಬೆಳಗಾವಿಯನ್ನು ಕಬಳಿಕೆ ಮಾಡುವ ದುರುದ್ದೇಶದಿಂದ ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿ ಕರವೇ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.
ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿ ಕೂರಬಾರದು. ಎಂಇಎಸ್ ಕಾರ್ಯಕರ್ತರನ್ನು ಮಟ್ಟ ಹಾಕಿ ಮತ್ತೊಮ್ಮೆ ನಾಡಿನ ತಂಟೆಗೆ ಬರದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಮೇಲೆ ಹಲ್ಲೆ ನಡೆಸಿರುವವರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ, ಎಂಇಎಸ್ಸಂಘಟನೆಯನ್ನು ನಿಷೇಧಿಸಬೇಕೆಂದು ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ಜೆ.ಜೆ. ವಿಶ್ವನಾಥ್, ಜಯದೇವ ಪ್ರಸನ್ನ, ಕೃಷ್ಣಮೂರ್ತಿ, ಡೆಕೋರೇಷನ್ ಕೃಷ್ಣ ಇದ್ದರು.
ಪ್ರತಿಕೃತಿ ದಹನ: ವಕೀಲ ರಾಜಗೋಪಾಲಗೌಡ ನೇತೃತ್ವದ ನವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೋಲಾರದಲ್ಲಿ ಎಂಇಎಸ್ ಮತ್ತು ಶಿವಸೇನೆಯ ವಿರುದ್ಧ ಪ್ರತಿಭಟನೆ ನಡೆಯಿತು. ವೇದಿಕೆ ಕಾರ್ಯಕರ್ತರು ಸರ್ಕಾರಿ ಬಸ್ ನಿಲ್ದಾಣದ ಬಳಿ ಎಂಇಎಸ್ ಪ್ರತಿಕೃತಿ ದಹನ ಮಾಡಿ ಘೋಷಣೆ ಕುಗಿದರು. ವಿವಾದಾತ್ಮಕ ನಾಮಫಲಕ ಹಾಕಿದ್ದಲ್ಲದೆ ಅದನ್ನು ತೆರವು ಮಾಡಲು ಹೋದ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಾಡಿ ದಾಂಧಲೆ ಎಸಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಎಂದು ಆಗ್ರಹಿಸಿದರು. ವೇದಿಕೆಯ ಕೋಲಾರ ತಾಲೂಕು ಅಧ್ಯಕ್ಷ ದಿನೇಶ್, ಸೋಮನಾಥ್, ಮುನಿಸ್ವಾಮಿ, ಬಾಬು, ವಿಜಯನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

