ಆರೋಗ್ಯದ ಕಡೆ ಗಮನಕೊಡಿ: ರಾಧಾಮಣಿ
ಬಂಗಾರಪೇಟೆ: ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದು ಬಿಎಂಎಸ್‌ಎಸ್ ಸಂಸ್ಥೆ ಸಂಯೋಜಕಿ ಎಂ.ವಿ. ರಾಧಾಮಣಿ ಹೇಳಿದರು.
ಸೂಲಿಕುಂಟೆ ಗ್ರಾಪಂ ವ್ಯಾಪ್ತಿಯ ಮುಗಳಬೆಲೆ ಗ್ರಾಮದಲ್ಲಿ ಬಸವೇಶ್ವರ ವಿದ್ಯಾ ಸಂಸ್ಥೆ, ಫೋಕಸ್ ಸಂಸ್ಥೆ ಮತ್ತು ಜನವಾದಿ ಮಹಿಳಾ ಸಂಘಟನೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಗಾರಪೇಟೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಕುಟುಂಬದ ಎಲ್ಲಾ ಸದಸ್ಯರ ಆರೋಗ್ಯವನ್ನು ವಿಚಾರಿಸುವ ಮಹಿಳೆಯರು ಕೆಲಸದ ಒತ್ತಡಗಳಿಂದ ತಮ್ಮ ಆರೋಗ್ಯದ ಕಡೆ ಗಮನ ನೀಡದೆ ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ತಾಯಿ ಆರೋಗ್ಯವಾಗಿದ್ದರೆ ಮಕ್ಕಳು ಆರೋಗ್ಯದಿಂದ ಇರಲು ಸಾಧ್ಯ ಎಂದರು. ಸೂಲಿಕುಂಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜನವಾದಿ ಮಹಿಳಾ ಸಂಘದ ಗ್ರಾಮ ಘಟಕಗಳ ಸದಸ್ಯರು, ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ಗ್ರಾಮದ ಮುಖಂಡರು ಉಚಿತ ಆರೋಗ್ಯದ ತಪಾಸಣೆ ಅನುಕೂಲವನ್ನು ಪಡೆದುಕೊಂಡರು. ಆರೋಗ್ಯ ಇಲಾಖೆ ಕಿರಿಯ ಸಹಾಯಕಿ ಗಿರಿಜಾ, ಆಪ್ತ ಸಲಹೆಗಾರ ಹುಸೇನ್, ಫೋಕಸ್ ಸಂಸ್ಥೆಯ ನಿರ್ದೇಶಕ ಎ.ಹರೀಶ್, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಎನ್.ರವೀಂದ್ರ, ಮುಖಂಡರಾದ ಶ್ರೀನಿವಾಸ್, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಕುಮಾರ್, ಜನವಾದಿ ಮಹಿಳಾ ಸಂಘಟನೆ ಮುಗಳಬೆಲೆ ಗ್ರಾಮದ ಅಧ್ಯಕ್ಷೆ ಲಕ್ಷ್ಮಮ್ಮ, ಹಂಸ, ಶೋಭ, ಪಾರ್ವತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

