ಕೋಲಾರ

ಕೀಳರಿಮೆಯಿಂದ ಹೊರಬರಲು ಸಾಹಿತಿ ಸಲಹೆ

Published On :

ತುಮಕೂರು: ಕೀಳರಿಮೆಯಿಂದ ಹೊರ ಬರುವಂತೆ ವಿದ್ಯಾರ್ಥಿಗಳಿಗೆ ಸಾಹಿತಿ ಎನ್. ನಾಗಪ್ಪ ಕರೆ ನೀಡಿದರು.ಶಿರಾ ತಾಲೂಕು ಚಿಕ್ಕನಹಳ್ಳಿಯ ಸರ್ಕಾರಿ ಎಸ್ಕೆವಿಟಿ ಪ.ಪೂ. ಕಾಲೇಜಿನಲ್ಲಿ 2014-15ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎಸ್ಎಸ್ಎಸ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇರುತ್ತದೆ. ಹೀಗಾಗಿ ಕೀಳರಿಮೆಯಿಂದ ಹೊರ ಬನ್ನಿ ಎಂದರು.
ಗುರಿ ಸಾಧನೆ: ನಮ್ಮ ದೇಶದಲ್ಲಿ ದೊಡ್ಡ ಸಾಧನೆಗಳನ್ನು ಮಾಡಿರುವರು ಮೂಲತಃ ಗ್ರಾಮೀಣ ಪ್ರದೇಶದಿಂದ ಬಂದವರೇ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅರೇಹಳ್ಳಿ ರಮೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗುರಿಯನ್ನು ಸಾಧಿಸುತ್ತೇನೆಂದು ಛಲ ಇರಬೇಕು ಎಂದು ತಿಳಿಸಿದರು. ಶಿರಾ ಎಪಿಎಂಸಿ ಅಧ್ಯಕ್ಷ ಶಶಿಧರಗೌಡ ಮಾತನಾಡಿ ಲೈಂಗಿಕ ದೌರ್ಜನ್ಯದ ಬಗ್ಗೆ ಎಚ್ಚರದಿಂದ ಇರಬೇಕೆಂದರು. ತಾ.ಪಂ. ಸದಸ್ಯ ಕಾಳೇಗೌಡರು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.