ಜನಸಂಖ್ಯೆ ಹೆಚ್ಚಾದಂತೆ ಸಂಪನ್ಮೂಲ ಕೊರತೆ
ತಿಪಟೂರು: ಜನಸಂಖ್ಯೆ ಹೆಚ್ಚಾದಂತೆ ಪ್ರಾಕೃತಿಕ ಸಂಪನ್ಮೂಲಗಳು ಕಡಿಮೆಯಾಗುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಪಿ. ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಯೋಜನಾ ಕಚೇರಿ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಸಬಾ ವಲಯದ ವತಿಯಿಂದ ನಡೆದ ಸೋಲಾರ್ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ 110 ಸೋಲಾರ್ ದೀಪಗಳನ್ನು ಹಾಕಿಸಿದ್ದು, ಜೊತೆಗೆ ಕಸಬಾ ಹೋಬಳಿಗೆ ಸಂಬಂಧಿಸಿದಂತೆ 110 ಕುಟುಂಬಗಳಿಗೆ ಸೋಲಾರ್ ದೀಪ ಹಾಕಿಸಿಕೊಡಲಾಗುತ್ತಿದೆ ಎಂದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ತಲಾ ರು. 15 ಸಾವಿರ ಸಾಲ ಮತ್ತು ಒಂದು ಸಾವಿರ ಸಹಾಯ ಧನ ನೀಡಲಾಗುತ್ತಿದೆ ಎಂದರು.ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಶ್ರೀ ಧರ್ಮಸ್ಥಳ ಯೋಜನೆ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹಸಿರು ಇಂಧನ ಕಾರ್ಯಕ್ರಮ ನಡೆಸುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ ಎಂದರು.ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ದಿಲೀಪ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಶಿವಣ್ಣ, ಹೈನುಗಾರಿಕಾ ಮೇಲ್ವಿಚಾರಕ ಶಶಿಕಿರಣ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

