ಕೆಜಿಎಫ್: ನಗರದ ಕನ್ನಡ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.2 ರಂದು ಶನಿವಾರ ಸಂಜೆ 3 ಗಂಟೆಗೆ ಕನ್ನಡ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಂಘದ ಅಧ್ಯಕ್ಷ ನರಸಿಂಹೇಗೌಡ ನಾರಣಾಪುರ ಅಧ್ಯಕ್ಷತೆ ವಹಿಸುವರು. ಪೊಲೀಸ್ ಉಪರಕ್ಷಣಾಧಿಕಾರಿ ಎ.ಕೆ. ವಿವೇಕಾನಂದ ಅವರು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಕೃಷ್ಣಮೂರ್ತಿ, ನೂರಿ ವಿದ್ಯಾ ಸಂಸ್ಥೆಯ ಮುಖ್ಯಸ್ಥ ನೂರಿ ಶಹಜಾದ್ ಭಾಗವಹಿಸಲಿದ್ದಾರೆ ಎಂದು ಕನ್ನಡ ಸಂಘ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.