ಗ್ರಾಪಂಗೆ ಮಹಿಳೆಯರ ಮುತ್ತಿಗೆ
ಬಂಗಾರಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೂರಾರು ಕಾರ್ಯಕರ್ತರು ಸೂಲಿಕುಂಟೆ, ಕಾರಹಳ್ಳಿ, ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮನವಿ ಪತ್ರವನ್ನು ಸಲ್ಲಿಸಿದರು.
ಸುತ್ತಮುತ್ತಲಿನ ಹಂಚಾಳ, ಮಾಗೇರಿ, ಸಿದ್ದನಹಳ್ಳಿ, ಮುಗಳಬೆಲೆ, ಸೂಲಿಕುಂಟೆ ರಾಮನಾಯಕನಹಳ್ಳಿ, ಗೊಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಂದ ಬಂದಿದ್ದ ಜನವಾದಿ ಮಹಿಳಾ ಸಂಘದ ಸದಸ್ಯರು ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಆಗ್ರಹಿಸಿದರು.
ಗೌರವ ಧನ ನೀಡಿ: ನಿರ್ಮಲ ಭಾರತ್ ಯೋಜನೆಯಡಿಯಲ್ಲಿ ಎಲ್ಲಾ ಬಡ ಕುಟುಂಬಗಳಿಗೂ ಶೌಚಾಲಯಗಳನ್ನು ನೀಡಬೇಕು, ಶೌಚಾಲಯಗಳ ನಿರ್ವಹಣೆಯ ಜವಾಬ್ದಾರಿಯನ್ನು ಆಯಾ ಗ್ರಾಮದ ಮಹಿಳಾ ಸ್ವಸಹಾಯ ಸಂಘಕ್ಕೆ ವಹಿಸಿ ಗೌರವ ಧನವನ್ನು ನೀಡಲು ಆಗ್ರಹಿಸಿದರು.
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಮಹಿಳೆಯರಿಗೆ ಜಾಬ್ಕಾರ್ಡ್ನಡಿ ಕೂಲಿ ಕೊಡಬೇಕು, ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಪ್ರತಿ ಗ್ರಾಮದಲ್ಲಿ ಮಹಿಳಾ ದೌರ್ಜನ್ಯ ಮತ್ತು ಲೈಂಗಿಕ ತಡೆ ಸಮಿತಿಗಳನ್ನು ರಚಿಸಿ, ಲಿಂಗಸಂವೇಧನಾ ತರಬೇತಿಗಳನ್ನು ಮಹಿಳೆರಿಗೆ ಮತ್ತು ಪುರುಷರಿಗೆ ನೀಡಬೇಕು. ಪಂಚಾಯಿತಿಯ ಶುದ್ಧ ನೀರಿನ ಘಟಕ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮನವಿಯನ್ನು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸಲ್ಲಿಸಿದರು.
ಶೌಚಾಲಯ ಕಡ್ಡಾಯ: ಪ್ರತಿಭಟನಾ ಸ್ಥಳಕ್ಕೆ ಭೇಡಿ ನೀಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್.ಆನಂದ್ ಅವರು ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಬಡ ಕುಟುಂಬಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನೀಡಬೇಕು. ಅದಕ್ಕೆ ಬೇಕಾದ ಹಣಕಾಸನ್ನು ಜಿಲ್ಲಾ ಪಂಚಾಯಿತಿ ಮೂಲಕ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹ ತಾಲೂಕು ಕಾರ್ಯದರ್ಶಿ ಎಂ.ಎನ್.ರವೀಂದ್ರ, ಡಿ.ವೈ.ಎಫ್ ಐನ ನಾರಾಯಣಸ್ವಾಮಿ, ಪ್ರತಾಪ್, ಜನವಾದಿ ಮಹಿಳಾ ಸಂಘದ ಮುಖಂಡರು ಹಾಗೂ ಬಿಎಂಎಸ್ಎಸ್ ಸಂಸ್ಥೆಯ ಸಂಯೋಜಕಿ ರಾಧಾಮಣಿ, ಮುಗಳಬೆಲೆ ಲಕ್ಷ್ಮಮ್ಮ ಮೊದಲಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

