ಗೌರಿಬಿದನೂರು: ರಾಜ್ಯ ಸರ್ಕಾರ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು, ತಕ್ಷಣ ಸರ್ಕಾರ ಕನಿಷ್ಠ 8 ಗಂಟೆ 3 ಫೇಸ್ ವಿದ್ಯುತ್ ನೀಡಬೇಕೆಂದು ಬಿಜೆಪಿ ಮುಖಂಡೆ ಎನ್. ಜ್ಯೋತಿರೆಡ್ಡಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ರೈತವಿರೋಧಿ ನೀತಿ ಧಿಕ್ಕರಿಸಿ ಮತ್ತು ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ, ಗೌರಿಬಿದನೂರು ಬೆಸ್ಕಾಂ ಉಪವಿಭಾಗ ಕಚೇರಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ಮಾತನಾಡಿ, ರೈತರಿಗೆ 2ರಿಂದ 3ಗಂಟೆಯೂ ವಿದ್ಯುತ್ ನೀಡುತ್ತಿಲ್ಲ. ತಾಲೂಕಿನಲ್ಲಿ ಬರಗಾಲ ಉಂಟಾಗಿದ್ದು, ಅಲ್ಪಸ್ವಲ್ಪ ಬೆಳೆಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರ ಪಂಪ್ಸೆಟ್ ಹಾಳಾಗುತ್ತಿದ್ದು ರೈತರಿಗೆ ಗಾಯದ ಮೇಲೆ ಬರೆಎಳೆದಂತಾಗಿದೆ ಎಂದು ಆರೋಪಿಸಿದರು. ಗೋಷ್ಠಿಯಲ್ಲಿ ರೈತಮೋರ್ಚಾ ಅಧ್ಯಕ್ಷ ಶ್ರೀನಿವಾಸಮೂರ್ತಿ, ತಾಲೂಕು ಅಧ್ಯಕ್ಷ ಗೋಪಿನಾಥ್, ಬಸಪ್ಪರೆಡ್ಡಿ, ಡಿಪಾಳ್ಯ ಶಶಿಧರ್, ನಾರಾಯಣರೆಡ್ಡಿ, ಬಿಜೆಪಿ ಕಾರ್ಯದರ್ಶಿ ಚಿಕ್ಕಕುರುಗೋಡು ನಾಗರಾಜರೆಡ್ಡಿ, ವಕ್ತಾರ ಜಯಣ್ಣ ಇದ್ದರು