ಕ್ರೀಡೆಯಿಂದ ಮಾನಸಿಕ ಬೆಳವಣಿಗೆ
ಟೇಕಲ್: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯ ಎಂದು ಪ್ರಾಂಶುಪಾಲ ರಾಮಚಂದ್ರಪ್ಪ ತಿಳಿಸಿದರು.
ಮಾಸ್ತಿ ವಿದ್ಯಾಪನ ಇಂಟರ್ ನ್ಯಾಷನಲ್ ಶಾಲೆಯ ಆಟದ ಮೈದಾನದಲ್ಲಿ ಮಾಸ್ತಿ ಹೋಬಳಿ ಮಟ್ಟದ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿ, ದೃಶ್ಯ ಮಾಧ್ಯಮಗಳ ಪ್ರಭಾವ ಹೆಚ್ಚಾಗಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದೆ ಎಂದರು. ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಟಿ. ಗುಂಡಪ್ಪ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು ಭಾಗವಹಿಸುವಿಕೆ ಮುಖ್ಯ ಎಂದರು. ಕೇಸರಗೆರೆ ರಘುನಾಥ್, ಎಂ. ಮುನಿನಾರಾಯಣ್, ಎ.ಎಂ. ರವಿ, ಉಪಪ್ರಾಂಶುಪಾಲ ತ್ರಿಶಂಕರ್, ಕವಿತಾದೇವಿ, ಮಾಸ್ತಿ ರವಿಶಂಕರ್, ದಿನ್ನಹಳ್ಳಿ ನಾಗರಾಜ್ ಇದ್ದರು.
ವಾಹನ ಸವಾರರೇ ಎಚ್ಚರ!
ಕೋಲಾರ: ನಗರದ ಎಂ.ಬಿ. ರಸ್ತೆಯಲ್ಲಿ ಹಳ್ಳಗಳು ಬಿದ್ದಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಜಿಲ್ಲಾ ಕುರುಬರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ತ್ಯಾಗರಾಜ್ ಮದ್ದಪ್ಪ ದೂರಿದ್ದಾರೆ. ಎಂ.ಬಿ.ರಸ್ತೆಯ ಅಗಲೀಕರಣ ಕಾಮಗಾರಿ ಮುಗಿದು ಕೇವಲ ಒಂದು ವರ್ಷವಾಗಿದೆ. ಆಗಲೇ ಈ ರಸ್ತೆಯಲ್ಲಿ ಹೊಂಡಗಳು ಬಿದ್ದಿದ್ದು, ಕಳಪೆ ಕಾಮಗಾರಿಗೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಕಳಪೆ ಕಾಮಗಾರಿ ನಡೆದಿದೆ. ರಸ್ತೆಯಲ್ಲಿ ಸುಮಾರು 2 ಅಡಿಗಳಷ್ಟು ಹಳ್ಳ ಬಿದ್ದು, ಇದೇ ರಸ್ತೆಯಲ್ಲಿ ಹಾದು ಹೋಗುವ ವಾಹನ ಸವಾರರಾಗಿಗೆ ತೀವ್ರ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಸೂಚನೆ
ಚಿಕ್ಕಬಳ್ಳಾಪುರ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸಹಾಯ ಯೋಜನೆ (ವಿದ್ಯಾಸಿರಿ), ವಿದ್ಯಾರ್ಥಿ ವೇತನ ಮತ್ತು ಶುಲ್ಕ ವಿನಾಯಿತಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತಿದೆ. ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪಾಲಿಟೆಕ್ನಿಕ್ , ಪದವಿ, ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್, ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ಮತ್ತು ಪಶುವೈದ್ಯಕೀಯ, ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಅಗತ್ಯವಿರುವ ಮಾಹಿತಿಯನ್ನು ಸಂಬಂಧಪಟ್ಟ ಕಾಲೇಜುಗಳು ಇಲಾಖೆಯ ಡಿಡಿಠ//್ಞಛ್ಠಜಠಛಡಡ.್ಛ್ಜ್ಜ.್ಜ್ಟಢ.್ಝಟಿ ವೆಬ್ ಸೈಟ್ನಲ್ಲಿ ಆ.10 ರೊಳಗೆ ಅಪ್ ಲೋಡ್ ಮಾಡಬೇಕೆಂದು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವಸ್ತು ಪ್ರದರ್ಶನ ಇಂದಿನಿಂದ
ಚಿಕ್ಕಬಳ್ಳಾಪುರ: ನಗರದ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.1 ಮತ್ತು 2 ರಂದು ಜಿಲ್ಲಾ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ನಡೆಯಲಿದೆ. ಇನ್ಸೆಪೈರ್ ಅವಾರ್ಡ್ ಪಡೆದಿರುವ ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶಿ ಶಿಕ್ಷಕರು ವಸ್ತು ಪ್ರದರ್ಶನದ ಮಾದರಿಗಳು ಮತ್ತು ಅಗತ್ಯ ಸಾಮಗ್ರಿಗಳೊಂದಿಗೆ ಆಗಮಿಸಬೇಕೆಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಡಾ.ಬಿ.ಆರ್ .ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2014-15ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ, (ಘಟಕ ವೆಚ್ಚ ರು1 ಲಕ್ಷದ ವರೆಗೆ) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, (ಘಟಕ ವೆಚ್ಚ ರು. 1 ಲಕ್ಷಕ್ಕೂ ಮೇಲ್ಪಟ್ಟು) (ವಾಹನ, ವ್ಯಾಪಾರ, ಸೇವೆ, ಕೈಗಾರಿಕೆ ಇತ್ಯಾದಿ) ಮತ್ತು ನಿಗಮದಿಂದ ನೇರವಾಗಿ ಮೈಕ್ರೋ ಕ್ರೆಡಿಟ್ ಮಹಿಳಾ ಸಮೃದ್ಧಿ ಯೋಜನೆ, ಮೈಕ್ರೋಫೈನಾನ್ಸ್ (ಕಿರುಸಾಲ) ಯೋಜನೆ ಮತ್ತು ಗಂಗಕಲ್ಯಾಣ ಯೋಜನೆಗಳಡಿ (ಪರಿಶಿಷ್ಟ ಜಾತಿ) ಆರ್ಥಿಕ ನೆರವನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಅಥವಾ ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿಗಳಿಂದ ಪಡೆದುಕೊಂಡು ಆ.25 ರೊಳಗೆ ಸಲ್ಲಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

