ಕೋಲಾರ

ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ

Published On :

ಗುಬ್ಬಿ: ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಿದ್ದು ಕೇಂದ್ರ ಸರ್ಕಾರ ದೇಶದ ಬಜೆಟ್‌ನಲ್ಲಿ  ಶೇ.18 ರಷ್ಟು ಅನುದಾನವನ್ನು ಶಿಕ್ಷಣಕ್ಕೆ ಮಿಸಲಿಟ್ಟಿದ್ದು ಇದರಿಂದ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ದೊರಕಿಸುವ ಮೂಲಕ ಅವರನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರಗತಿ ಪಥದತ್ತ ಸಾಗುವಂತೆ ಮಾಡಲಾಗುತ್ತಿದೆ ಎಂದರು. ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕೀಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ, ಬಿಸಿಯೂಟ ವಿತರಣೆ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ಹಾಲು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಪಥದತ್ತ ಕೊಂಡೊಯ್ಯುವಂತೆ ಕರೆ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದ ಅವರು ಗ್ರಾಮೀಣ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಿನೂತನ ಯೋಜನೆಗಳನ್ನು ಶಿಕ್ಷಣ ಇಲಾಖೆ ಕಲ್ಪಿಸಿದೆ ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಗಳು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಕರೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು ಮಾತನಾಡಿ ಸರಕಾರದ ಆದೇಶದಂತೆ ಶಾಲಾ ಪ್ರಾರಂಭೋತ್ಸವದ ದಿನದಿಂದಲೇ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಕ್ಷೀರ ಭಾಗ್ಯ, ಅಕ್ಷರದಾಸೋಹ, ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು ರಾಷ್ರೀಯ ಶಿಕ್ಷಣ ನೀತಿ ಅನುಸಾರ ದೇಶದ ಎಲ್ಲ ಭಾಗಗಳಲ್ಲೂ ಏಕ ರೀತಿಯ ಪಠ್ಯಕ್ರಮಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.