ಕೋಲಾರ

ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ

Published On :

5 ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಜೂ.4ರಿಂದ ಟ್ರಯಲ್ಸ್
ಕೋಲಾರ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಬಾಲ್ಯದಿಂದಲೇ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡುವ ಸಲುವಾಗಿ ರಾಜ್ಯದ 23 ಜಿಲ್ಲೆಗಳಲ್ಲಿ ಕ್ರೀಡಾ ವಸತಿ ನಿಲಯಗಳನ್ನು ಪ್ರಾರಂಭಿಸಿದೆ.
ಅದರಂತೆಯೇ ಕೋಲಾರ ಜಿಲ್ಲೆಯಲ್ಲಿಯೂ ಅಥ್ಲೆಟಿಕ್ಸ್ ಮತ್ತು ಫುಟ್ಬಾಲ್ ತರಬೇತಿ ನೀಡುವ ಉದ್ದೇಶದಿಂದ ಜಿಲ್ಲಾ ಕ್ರೀಡಾ ವಸತಿ ನಿಲಯವನ್ನು ಸ್ಥಾಪಿಸಲಾಗಿದೆ.  ಪ್ರಸ್ತುತ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು 10 ವರ್ಷ ತುಂಬಿರುವ 25 ಕ್ರೀಡಾಪಟುಗಳನ್ನು ಹಾಗೂ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 13 ವರ್ಷ ತುಂಬಿರುವ 25 ಕ್ರೀಡಾಪಟುಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು.
5 ನೇ ತರಗತಿಯಲ್ಲಿ ವ್ಯಾಸಂಗ ಮಾಡುವವರು ಅಥ್ಲೆಟಿಕ್‌ಗೆ ಸೇರಬಯಸುವ ಕ್ರೀಡಾಪಟುಗಳು ಕನಿಷ್ಠ ಎತ್ತರ-130 ಸೆಂ.ಮೀ ಮತ್ತು ದೈಹಿಕ ಪರೀಕ್ಷೆಗಳು.  ಫುಟ್ಬಾಲ್‌ಗೆ ತರಬೇತಿಗೆ ಸೇರಬಯಸುವ ಕ್ರೀಡಾಪಟುಗಳು ಕನಿಷ್ಠ ಎತ್ತರ-140 ಸೆ.ಮೀ ಮತ್ತು ದೈಹಿಕ ಪರೀಕ್ಷೆಗಳು. 8ನೇ ತರಗತಿಗೆ ಆಯ್ಕೆ ಮಾಡಿಕೊಳ್ಳುವ ಕ್ರೀಡಾಪಟುಗಳ ತಮ್ಮ ದೈಹಿಕ ಮಾಹಿತಿ ಲಗತ್ತಿಸಬೇಕಾಗಿದೆ.
ಜೂ.4ರಂದು ಬೆಳಿಗ್ಗೆ 10 ಗಂಟೆಗೆ ಮಾಲೂರು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ, ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ನೇತಾಜಿ ಕ್ರೀಡಾಂಗಣದಲ್ಲಿ, ಜೂ.5ರಂದು ಬೆಳಿಗ್ಗೆ 10 ಗಂಟೆಗೆ ಶ್ರೀನಿವಾಸಪುರ ತಾಲೂಕು ಕ್ರೀಡಾಂಗಣದಲ್ಲಿ, ಮಧ್ಯಾಹ್ನ 2 ಗಂಟೆಗೆ ಬಂಗಾರಪೇಟೆ ತಾಲೂಕು ಕ್ರೀಡಾಂಗಣದಲ್ಲಿ, ಜೂ.6 ರಂದು ಬೆಳಿಗ್ಗೆ 10 ಗಂಟೆಗೆ ಕೋಲಾರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ನಡೆಯಲಿದೆ.
ಕನಿಷ್ಠ ಐದು ಅಂಕಗಳನ್ನು ಗಳಿಸಿದ ಕ್ರೀಡಾಪಟುಗಳು ದಾಖಲಾತಿಗೆ ಅರ್ಹರಾಗಿರುತ್ತಾರೆ. ಸದರಿ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸುವವರಿಗೆ ಪ್ರಯಾಣ, ದಿನ ಭತ್ಯೆಯನ್ನು ಇಲಾಖಾ ವತಿಯಿಂದ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ, ಅಂತರಗಂಗೆ ರಸ್ತೆ, ಕೋಲಾರ ಅಥವಾ ಪಿ.ಎಲ್. ಶಂಕರಪ್ಪ, ಅಥ್ಲೆಟಿಕ್ಸ್ ಮತ್ತು ಬೇತುದಾರರು, ಮೊ: 9845301245 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.