ಡಿಸಿ ಕಚೇರಿ ಮುಂದೆ ಕಟ್ಟಡ ಕಾರ್ಮಿಕರ ಧರಣಿ
ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಅಧಿಕಾರಿಗಳಿಂದ ವಿಳಂಬ ನೀತಿ: ಆರೋಪ
ಕೋಲಾರ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಿಪಿಐಟಿಯು ಪ್ರಾಯೋಜಿತ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಸಿಗಬೇಕಾದ ಸಲವತ್ತುಗಳನ್ನು ನೀಡಲು ಕಾರ್ಮಿಕ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಂಚಣಿ, ವೈದ್ಯಕೀಯ, ಶಿಕ್ಷಣ, ಹೆರಿಗೆ, ಮನೆ ನಿರ್ಮಾಣ ಹಾಗೂ ಖರೀದಿಗೆ ಸಾಲ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರಿ ಜಾರಿ ಮಾಡಿದೆ. ಅಧಿಕಾರಿಗಳು ಕಳೆದ ಒಂದು ವರ್ಷದ ಹಿಂದೆ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸತಾಯಿಸುತ್ತಿದ್ದಾರೆಂದು ದೂರಿದರು.
ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಲು 6 ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ, ಜಿಲ್ಲೆಯ ಕಾರ್ಮಿಕ ಮಂಡಳಿಯಲ್ಲಿ ಸಿಬ್ಬಂದಿ ಕೊರತೆ ನಿವಾರಣೆ ಮಾಡಿಲ್ಲ, ಸಕಾಲ ಕೇಂದ್ರದಲ್ಲೂ ಅರ್ಜಿಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲವೆಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಕಳೆದ ಒಂದು ವರ್ಷದಲ್ಲಿ ವಿವಿಧ ಸವಲತ್ತುಗಳಿಗಾಗಿ 986 ಅರ್ಜಿಗಳು ಸಲ್ಲಿಕೆ ಆಗಿವೆ. ಇದರಲ್ಲಿ 28 ಮಂದಿ ಸತ್ತಿದ್ದು ಇನ್ನು ಮರಣ ಪರಿಹಾರ ನೀಡಿಲ್ಲ. 13 ಮಂದಿಗೆ ಹೆರಿಗೆ ಪರಿಹಾರ, 33 ಮಂದಿಗೆ ವಿವಾಹಕ್ಕೆ ಸಹಾಯಧನ, 19 ಜನರಿಗೆ ವೈದ್ಯಕೀಯ ಸಹಾಯಧನ, 892 ಮಂದಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ನೀಡಬೇಕಾಗಿದೆ ಎಂದು ಮುಖಂಡರು ತಿಳಿಸಿದರು. ಪ್ರತಿಭಟನೆಯ ನೇತೃತ್ವವನ್ನು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಸಿದ್ದನಹಳ್ಳಿ ಸೀನಪ್ಪ, ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ, ಖಜಾಂಚಿ ಆನಂದ್ ಭಾಗಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

